ಪಚ್ಚನಾಡಿ–ಬೋಂದೆಲ್ ಮುಖ್ಯ ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿ: ಶಾಸಕ ಡಾ. ಭರತ್ ವೈ ಶೆಟ್ಟಿ ಪರಿಶೀಲನೆ

Upayuktha
0

 


ಮಂಗಳೂರು: ಪಚ್ಚನಾಡಿ ವಾರ್ಡ್‌ನ ಮಂಗಳ ಜ್ಯೋತಿ–ಪಚ್ಚನಾಡಿ–ಬೋಂದೆಲ್ ಮುಖ್ಯ ರಸ್ತೆಯ ಮಧ್ಯ ಮಧ್ಯದಲ್ಲಿ ಡಾಮರೀಕರಣ ಮಾಡಲಾಗುತ್ತಿದ್ದು, ಪ್ರತೀ ವರ್ಷ ಮಳೆಯಿಂದ ರಸ್ತೆ ಹಾನಿಗೊಳಗಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ವೈ. ಶೆಟ್ಟಿ ವಿಶೇಷ ಮುತುವರ್ಜಿ ವಹಿಸಿ ಮಹಾತ್ಮ ಗಾಂಧಿ ಯೋಜನೆಯಡಿ ಸಂಪೂರ್ಣ ರಸ್ತೆ ಕಾಂಕ್ರೀಟೀಕರಣಕ್ಕೆ ಅನುದಾನ ಒದಗಿಸಿದ್ದಾರೆ. ಪ್ರಸ್ತುತ ರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ.


ಸದರಿ ಕಾಮಗಾರಿ ಸ್ಥಳಕ್ಕೆ ಶಾಸಕ ಡಾ. ಭರತ್ ವೈ. ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸ್ಥಳೀಯರು ಹಾಗೂ ಸಾರ್ವಜನಿಕರ ಮನವಿಗಳನ್ನು ಆಲಿಸಿದ ಅವರು, ಕಾಮಗಾರಿ ಗುಣಮಟ್ಟದೊಂದಿಗೆ ಹಾಗೂ ವ್ಯವಸ್ಥಿತವಾಗಿ ನಡೆಯುವಂತೆ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದರು.


ಮಳೆಗಾಲವಾಗಿರುವುದರಿಂದ ವಾಹನ ಸಂಚಾರಕ್ಕೆ ಯಾವುದೇ ಅಡಚಣೆ ಆಗದಂತೆ ನೋಡಿಕೊಳ್ಳಬೇಕು. ಜೊತೆಗೆ ಪ್ರತಿಯೊಂದು ಸಂಪರ್ಕ ರಸ್ತೆಗೆ ರ್ಯಾಂಪ್ ನಿರ್ಮಿಸಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ತುರ್ತಾಗಿ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಶಾಸಕ ಡಾ. ಭರತ್ ವೈ. ಶೆಟ್ಟಿ ಸೂಚಿಸಿದರು.


ಈ ಸಂದರ್ಭದಲ್ಲಿ ಮನಪ AE ಕೊಟ್ರೇಶ್, ಕಿರಿಯ ಅಭಿಯಂತರ ಮಿಥುನ್, ಮಂಡಲ ಪ್ರಧಾನ ಕಾರ್ಯದರ್ಶಿ ಸಂದೀಪ್ ಬೋಂದೆಲ್, ವಾರ್ಡ್ ಅಧ್ಯಕ್ಷ ಭಾಸ್ಕರ್, ಪ್ರಮುಖರಾದ ರವೀಂದ್ರ ನಾಯಕ್, ವಿಲ್ಫ್ರೇಡ್ ಸಾಲ್ದಾನ್ಹ, ಇಂದಿರಾ ಸುವರ್ಣ, ಉತ್ತಯ್ಯ, ಅಶೋಕ್ ಆಚಾರ್ಯ, ಧನುಷ್ ಕೊಟ್ಟಾರಿ, ರತನ್ ಬಂದಲೆ, ನವೀನ್, ಬಾಲಕೃಷ್ಣ ಕುಕ್ಯಾನ್ ಮತ್ತಿತರರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top