ಅಮೃತ ಪ್ರಕಾಶ ಪತ್ರಿಕೆಯ 13ನೇ ವರ್ಷದ ವಾರ್ಷಿಕೋತ್ಸವ ವಿಶೇಷ ಸಂಚಿಕೆ ಬಿಡುಗಡೆ

Upayuktha
0


 

ಮಂಗಳೂರು: ಅಮೃತ ಪ್ರಕಾಶ ಪತ್ರಿಕೆಯ 13ನೇ ವರ್ಷದ ವಾರ್ಷಿಕೋತ್ಸವ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮವು ಮಂಗಳೂರು ಪತ್ರಿಕಾ ಭವನದಲ್ಲಿ ಜುಲೈ 21ರಂದು ಮಂಗಳವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾವೂರು ಬಂಟರ ಸಂಘದ ಅಧ್ಯಕ್ಷರಾದ ಆನಂದ ಶೆಟ್ಟಿ ಅಡ್ಯಾರ್ ವಹಿಸಿದರು.


ಯಾವುದೇ ಪತ್ರಿಕೆ ಕೇವಲ ಸುದ್ದಿಗಳನ್ನು ಪ್ರಕಟಿಸುವ ಮಾಧ್ಯಮವಲ್ಲ ಅದು ಸಮಾಜದ ಧ್ವನಿ. ಸಂಸ್ಕೃತಿಯ ಪ್ರತಿಬಿಂಬ ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಶಕ್ತಿಯಾಗಿದೆ. ಕಳೆದ 13 ವರ್ಷಗಳಿಂದ ಅಮೃತ ಪ್ರಕಾಶ ಪತ್ರಿಕೆ ಸಮಾಜಮುಖಿ ವಿಚಾರಗಳು, ಮಹಿಳಾ ಸಬಲೀಕರಣ, ಶಿಕ್ಷಣ, ಸಾಹಿತ್ಯ, ಸಂಸ್ಕೃತಿ ಮತ್ತು ಸಾಮಾಜಿಕ ಮೌಲ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಶ್ರೇಷ್ಠ ಸೇವೆ ಸಲ್ಲಿಸಿದೆ ಎಂದರು.


ಅಮೃತ ಪ್ರಕಾಶ  ವಿಶೇಷ ಸಂಚಿಕೆಯನ್ನು ಮಾಜಿ ರಾಜ್ಯಾಧ್ಯಕ್ಷರು ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಬಿಡುಗಡೆಗೊಳಿಸಿ ಸುದೀರ್ಘ 13 ವರ್ಷಗಳಿಂದ ಗುಣಮಟ್ಟದ ಮೌಲ್ಯಯುತ ಪತ್ರಿಕೆಯನ್ನು ಸಮಾಜಕ್ಕೆ ನೀಡುತ್ತಾ ನಿರಂತರ ಸಾಹಿತ್ಯ ಸೇವೆ ಮಾಡುವ ಡಾ.ಮಾಲತಿ ಶೆಟ್ಟಿ ಮಾಣೂರು ಅವರ ಕೆಲಸ ಶ್ಲಾಘನೀಯ ಎಂದು ಪತ್ರಿಕೆಗೆ ಶುಭ ಹಾರೈಸಿದರು.


ಮುಖ್ಯ ಅತಿಥಿಯಾಗಿ ಸಮಾಜ ಸೇವಕಿ ಹಾಗೂ ಉದ್ಯಮಿ ಲಯನ್ ಆಶಾ ರಾವ್ ಆರೂರು, ಉಪಸ್ಥಿತರಿದರು. ಅಮೃತ ಪ್ರಕಾಶ ಪತ್ರಿಕೆ  ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ, ಮಾಣೂರು. ಸ್ವಾಗತಿಸಿದರು ಲೇಖಕಿ ಹಾಗೂ ಶಿಕ್ಷಕಿ ಸುರೇಖಾ ಯಾಳವಾರ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top