72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ರೋಹನ್ ಕಾರ್ಪೊರೇಷನ್ ವತಿಯಿಂದ ಸನ್ಮಾನ

Upayuktha
0

 


ಮಂಗಳೂರು: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ರೋಹನ್ ಕಾರ್ಪೊರೇಷನ್ ವತಿಯಿಂದ ಶನಿವಾರ ಮಂಗಳೂರಿನ ಬಿಜೈನ ರೋಹನ್ ಸಿಟಿಯಲ್ಲಿ ವಿಶೇಷ ಸಮಾರಂಭದ ಮೂಲಕ ಸನ್ಮಾನಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಹನ್ ಕಾರ್ಪೊರೇಷನ್ ನಿರ್ದೇಶಕ ಡಿಯಾನ್ ಮಾಂತೆರೊ ಹಾಗೂ ಸಂಸ್ಥೆಯ ಜನರಲ್ ಮ್ಯಾನೇಜರ್ ಸುಮನಾ ವಹಿಸಿದ್ದರು. ರಾಷ್ಟ್ರೀಯ ಮಟ್ಟದಲ್ಲಿ ಕರಾವಳಿ ಭಾಗಕ್ಕೆ ಹೆಮ್ಮೆ ತಂದ ಸಾಧಕರನ್ನು ಅಭಿನಂದಿಸಿ ಗೌರವಿಸಿದರು.


ಸನ್ಮಾನ ಸ್ವೀಕರಿಸಿದವರಲ್ಲಿ 'ಮಿಥ್ಯ' ಚಿತ್ರದ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿ, ಅದೇ ಚಿತ್ರದ ಅತ್ಯುತ್ತಮ ಬಾಲ ಕಲಾವಿದ ಪ್ರಶಸ್ತಿ ಪಡೆದ ಮಾಸ್ಟರ್ ಅಥೀಶ್ ಎಸ್. ಶೆಟ್ಟಿ, ಅತ್ಯುತ್ತಮ ಸಿನಿಮಾ ಪುಸ್ತಕ ವಿಭಾಗದಲ್ಲಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಡಾ. ಪ್ರದೀಪ್ ಕೆಂಚನೂರು, ಹಾಗೂ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಅತ್ಯುತ್ತಮ ತುಳು ಚಿತ್ರ ಪ್ರಶಸ್ತಿ ಪಡೆದ 'ಇಂಬು' ಚಿತ್ರದ ನಿರ್ದೇಶಕ ಶಿವಧ್ವಜ್ ಶೆಟ್ಟಿ ಮತ್ತು ನಿರ್ಮಾಪಕ ಪ್ರಶಾಂತ್ ರೈ ಸೇರಿದ್ದರು.


ಸನ್ಮಾನ ಸ್ವೀಕರಿಸಿದ ಗಣ್ಯರು ರೋಹನ್ ಕಾರ್ಪೊರೇಷನ್‌ಗೆ ಕೃತಜ್ಞತೆ ಸಲ್ಲಿಸಿ, ತಮ್ಮ ಸಿನಿ ಮತ್ತು ಸಾಹಿತ್ಯ ಪಯಣದ ಅನುಭವಗಳನ್ನು ಹಂಚಿಕೊಂಡರು. ಸಾಧನೆಯ ಹಿಂದಿನ ಪರಿಶ್ರಮ, ತಾಳ್ಮೆ ಮತ್ತು ಸಮರ್ಪಣೆಯ ಕುರಿತು ಮಾತನಾಡಿದರು.


ಈ ಸಂದರ್ಭದಲ್ಲಿ ಮಾತನಾಡಿದ ಡಿಯಾನ್ ಮಾಂಟೇರೊ, ರಾಷ್ಟ್ರೀಯ ಪ್ರಶಸ್ತಿ ವಿಜೇತರು ಕರಾವಳಿ ಭಾಗಕ್ಕೆ ಅಪಾರ ಹೆಮ್ಮೆ ತಂದಿದ್ದಾರೆ ಎಂದು ಶ್ಲಾಘಿಸಿದರು. ಇಂತಹ ಸಾಧಕರನ್ನು ಗೌರವಿಸುವುದು ರೋಹನ್ ಕಾರ್ಪೊರೇಷನ್‌ಗೆ ಹೆಮ್ಮೆಯ ವಿಷಯವಾಗಿದ್ದು, ಅವರ ಸಾಧನೆ ಮುಂದಿನ ಪೀಳಿಗೆಯ ಕಲಾವಿದರು, ಚಿತ್ರ ನಿರ್ದೇಶಕರು ಹಾಗೂ ಕಥೆಗಾರರಿಗೆ ಸ್ಫೂರ್ತಿಯಾಗಲಿ ಎಂದು ಆಶಿಸಿದರು.


ಲವಿತಾ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top