ಮಂಗಳೂರು: ನಗರದ ಎಸ್ ಸಿ ಎಸ್ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕಲ್ಯಾಣ ಮಂಡಳಿ ವತಿಯಿಂದ ಇತ್ತೀಚೆಗೆ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿ ನಿವೃತ್ತ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ ದೇಶಸೇವೆ, ಶಿಸ್ತು, ರಾಷ್ಟ್ರಭಕ್ತಿ ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾರತೀಯ ಯೋಧರು ತೋರಿದ ಅಪ್ರತಿಮ ಸಾಹಸದ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡು ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಸಂದೇಶ ನೀಡಿದರು.
ಕಾಲೇಜು ಪ್ರಾಂಶುಪಾಲ ಹಾರ್ದಿಕ್ ಪಿ. ಚೌಹಾಣ್ ಅಧ್ಯಕ್ಷೀಯ ಭಾಷಣದಲ್ಲಿ ರಾಷ್ಟ್ರೀಯ ಏಕತೆ, ಅಖಂಡತೆ ಹಾಗೂ ದೇಶಸೇವೆಯ ಮೌಲ್ಯಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.
ಇಂಗ್ಲಿಷ್ ವಿಭಾಗ ಮುಖ್ಯಸ್ಥೆ ಹಾಗೂ ವಿದ್ಯಾರ್ಥಿ ಕಲ್ಯಾಣ ಮಾರ್ಗದರ್ಶಕಿ ಮಧುಮತಿ ಜೆ. ರಾಜ ಕಾರ್ಗಿಲ್ ವಿಜಯ್ ದಿವಸದ ಮಹತ್ವ ಹಾಗೂ ಭಾರತೀಯ ಸಶಸ್ತ್ರ ಪಡೆಗಳ ಶೌರ್ಯವನ್ನು ವಿವರಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ವಂದನಾ ಕಾರ್ಗಿಲ್ ವಿಜಯ್ ದಿವಸ್ ನ ಕುರಿತು ಗೌರವಗೀತೆ ಹಾಡಿದರು. ಫ್ಯಾಷನ್ ಡಿಸೈನ್ ವಿಭಾಗದ ಮುಖ್ಯಸ್ಥೆ ರಜಿತಾ ಮಧುರಾಜ್ ಅವರು ಕಾರ್ಗಿಲ್ ಯುದ್ಧದ ಪರಂವೀರ ಚಕ್ರ ಮತ್ತು ಮಹಾವೀರ ಚಕ್ರ ಪ್ರಶಸ್ತಿ ಪುರಸ್ಕೃತ ವೀರ ಯೋಧರ ಹೆಸರುಗಳನ್ನು ವಾಚಿಸಿದರು. ಬಳಿಕ ಹುತಾತ್ಮ ಯೋಧರ ಗೌರವಾರ್ಥ ಎರಡು ನಿಮಿಷಗಳ ಮೌನಾಚರಣೆ ನಡೆಸಲಾಯಿತು.
ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥ ಹಾಗೂ ವಿದ್ಯಾರ್ಥಿ ಕಲ್ಯಾಣ ಮಾರ್ಗದರ್ಶಕ ತಿಲಕ್ ಗೌಡ ಅವರು "ರಾಷ್ಟ್ರ ಮೊದಲು" ಪ್ರತಿಜ್ಞೆಯನ್ನು ಬೋಧಿಸಿದರು. ತೃತೀಯ ಬಿಸಿಎ ವಿದ್ಯಾರ್ಥಿ ಭೂಷಣ್ ಶೆಟ್ಟಿ ಸ್ವಾಗತಿಸಿ, ತೃತೀಯ ಬಿಸಿಎ ವಿದ್ಯಾರ್ಥಿನಿ ರೀಶಲ್ ಡಿ'ಸೋಜಾ ವಂದಿಸಿದರು. ತೃತೀಯ ಬಿ. ಕಾಂ ವಿದ್ಯಾರ್ಥಿನಿ ಅಪೂರ್ವ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


