ಎಸ್‌.ಸಿ.ಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಗರ್ಭಾಶಯ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

Upayuktha
0

 



ಮಂಗಳೂರು: ಎಸ್‌.ಸಿ.ಎಸ್ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನಾ ಸಂಘದ ವತಿಯಿಂದ ಇತ್ತೀಚೆಗೆ "ಗರ್ಭಾಶಯ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ" ಯಶಸ್ವಿಯಾಗಿ ನಡೆಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಕೇರ್ ಎನ್ ಸೇಫ್ ಆಫ್ ಇಂಡಿಯಾ (NGO), ಮಂಗಳೂರು ಸಂಸ್ಥೆಯ ಅಮಿತಾ ಕೆ. ನಾಯಕ್ ಗರ್ಭಾಶಯ ಕ್ಯಾನ್ಸರ್ ಕುರಿತು ಸಮಗ್ರ ಮಾಹಿತಿ ನೀಡಿದರು. ಗರ್ಭಾಶಯ ಕ್ಯಾನ್ಸರ್ ಉಂಟಾಗುವ ಕಾರಣಗಳು, ಆರೋಗ್ಯ ತಪಾಸಣೆಯ ಅಗತ್ಯತೆ ಹಾಗೂ ಆರೋಗ್ಯಕರ ಜೀವನಶೈಲಿಯ ಮೂಲಕ ರೋಗವನ್ನು ತಡೆಗಟ್ಟಬಹುದಾದ ಕ್ರಮಗಳನ್ನು ವಿವರಿಸುವ ಮೂಲಕ ಮಹತ್ವದ ಸಂದೇಶವನ್ನು ನೀಡಿದರು. ಕಾರ್ಯಕ್ರಮದ ಕೊನೆಯಲ್ಲಿ ಸಿಬ್ಬಂದಿಯ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರಿಸಿ ಅವರಲ್ಲಿದ್ದ ಹಲವು ಸಂದೇಹಗಳನ್ನು ನಿವಾರಿಸಿದರು.


ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಹಾರ್ದಿಕ್ ಪಿ. ಚೌಹಾಣ್ ಸಂಪನ್ಮೂಲ ವ್ಯಕ್ತಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಸಿಬ್ಬಂದಿ ಕ್ಷೇಮ ಪಾಲನಾ ಸಂಘದ ಕಾರ್ಯದರ್ಶಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥೆ ಸುಚಿತ್ರ ಪಿ. ಶೆಟ್ಟಿ ಸ್ವಾಗತಿಸಿ, ಮಹಿಳೆಯರ ಆರೋಗ್ಯದ ಕುರಿತು ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳು ಅಗತ್ಯವಾಗಿದ್ದು, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಜಾಗೃತಿಯೇ ಮೊದಲ ಹೆಜ್ಜೆಯಾಗಿದೆ ಎಂದು ಹೇಳಿದರು. 


ಬಿಬಿಎ ವಿಭಾಗದ ಉಪನ್ಯಾಸಕಿ ಸಂಗೀತ ಶಾನುಭೋಗ ವಂದಿಸಿದರು. ಕನ್ನಡ ವಿಭಾಗದ ಉಪನ್ಯಾಸಕಿ ಸರಸ್ವತಿ ಚಿನ್ನಕಟ್ಟೆ ನಿರ್ವಹಿಸಿದರು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top