ಮಂಗಳೂರು: ಎಸ್ ಸಿ ಎಸ್ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಕ್ಷೇಮ ಪಾಲನ ಮಂಡಳಿಯ ವತಿಯಿಂದ ಬುಧವಾರ ಗುರು ಪೂರ್ಣಿಮೆ ಕಾರ್ಯಕ್ರಮವನ್ನು ಆಚರಿಸಲಾಯಿತು.
ಮಕ್ಕಳ ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದ ಮುಂಚೂಣಿ ಸಾಧಕಿ ಸಾವಿತ್ರಿ ಎಸ್. ರಾವ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಮಹರ್ಷಿ ವೇದವ್ಯಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಜ್ಞಾನದೀಪ ಬೆಳಗಿಸಿ ಮಾತನಾಡಿ, ಶಿಕ್ಷಕರು ಹಾಗೂ ಪೋಷಕರಿಗೆ ಗೌರವ ಸಲ್ಲಿಸುವ ಸಂಸ್ಕಾರವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಬೆಳೆಸಿಕೊಳ್ಳಬೇಕು ಎಂದರು. ವಿದ್ಯೆ, ವಿನಯ ಮತ್ತು ವಿಧೇಯತೆ ಎಂಬ ಮೂರು ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಶಿಕ್ಷಣ ಸಾರ್ಥಕವಾಗುತ್ತದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಹತ್ತು ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಳ್ಳುವಂತೆ ಕರೆ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಹಾರ್ದಿಕ್ ಪಿ. ಚೌಹಾಣ್ ಅಧ್ಯಕ್ಷೀಯ ಮಾತುಗಳನ್ನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಜ್ಞಾನ, ವಿನಯ ಹಾಗೂ ಶಿಸ್ತಿನ ಮೌಲ್ಯಗಳನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು.
ಸಾವಿತ್ರಿ ಎಸ್ ರಾವ್ ಅವರ ಸಾಧನೆಯನ್ನು ಗುರುತಿಸಿ ಅವರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ವಿದ್ಯಾರ್ಥಿ ಕ್ಷೇಮಪಾಲನ ಮಾರ್ಗದರ್ಶಕಿ ಮಧುಮತಿ ಜೆ. ರಾಜ ಗುರು ಪೂರ್ಣಿಮೆಯ ಮಹತ್ವವನ್ನು ವಿವರಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ವಂದನಾ ಪುರಂದರದಾಸರ ಕೀರ್ತನೆಯನ್ನು ಹಾಡುವ ಮೂಲಕ ಗುರು ವಂದನೆ ಸಲ್ಲಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಸುಚಿತ್ರಾ ಪಿ. ಶೆಟ್ಟಿ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ವಿದ್ಯಾರ್ಥಿ ಕ್ಷೇಮ ಪಾಲನಾ ಮಾರ್ಗದರ್ಶಕರಾದ ತಿಲಕ್ ಗೌಡ ಉಪಸ್ಥಿತರಿದ್ದರು.
ತೃತೀಯ ಬಿ.ಸಿ.ಎ ವಿದ್ಯಾರ್ಥಿನಿ ರೀಶಲ್ ಡಿಸೋಜಾ ಸ್ವಾಗತಿಸಿ, ದ್ವಿತೀಯ ಬಿ.ಬಿ.ಎ ಶಶಾಂಕ್ ಎಸ್. ವಂದಿಸಿದರು. ತೃತೀಯ ಬಿ.ಕಾಂ ವಿದ್ಯಾರ್ಥಿನಿ ಅಪೂರ್ವಾ ನಿರೂಪಿಸಿದರು. ಸುಮಾರು 70 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


