ಎಸ್‌ಡಿಎಂ ಬಿವೋಕ್‌ ವಿಭಾಗದಲ್ಲಿ ಸಿನಿಮಾ ಹಾಗೂ ಬ್ರ್ಯಾಂಡಿಂಗ್‌ ಕುರಿತು ವಿಶೇಷ ಸಂವಾದ ಕಾರ್ಯಕ್ರಮ

Upayuktha
0

 



ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಬಿ.ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ವತಿಯಿಂದ ಚಿತ್ರರಂಗ, ಸಿನಿಮಾ ನಿರ್ಮಾಣ, ಕಂಟೆಂಟ್ ಸೃಷ್ಟಿ ಹಾಗೂ ಡಿಜಿಟಲ್ ಬ್ರ್ಯಾಂಡಿಂಗ್ ಕುರಿತು ವಿಶೇಷ ಸಂವಾದ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಹೈದರಾಬಾದಿನ 'ಲೈಟ್ಸ್ ಕ್ಯಾಮೆರಾ ವುಮನ್' ಸಂಸ್ಥೆಯ ಸಂಸ್ಥಾಪಕಿ ಹಾಗೂ ಚಲನಚಿತ್ರ ನಿರ್ದೇಶಕಿ ನವ್ಯ ನಾಗೇಶ್, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಹಿಂಜರಿಯಬಾರದು. ಉತ್ತಮ ಪೋರ್ಟ್‌ಫೋಲಿಯೊ ನಿರ್ಮಾಣ, ನಿರಂತರ ಕಲಿಕೆ ಹಾಗೂ ಸ್ಥಳೀಯ ಸಂಸ್ಕೃತಿಯನ್ನು ಆಧರಿಸಿದ ಕಥೆಗಳೇ ಜಾಗತಿಕ ಮಟ್ಟದಲ್ಲೂ ಗುರುತಿಸಿಕೊಳ್ಳಲು ನೆರವಾಗುತ್ತವೆ ಎಂದು ಹೇಳಿದರು. ಪ್ರತಿಯೊಂದು ದೃಶ್ಯವೂ ಸೂಕ್ತ ಯೋಜನೆಯೊಂದಿಗೆ ರೂಪುಗೊಳ್ಳಬೇಕಿದ್ದು, ಸುತ್ತಮುತ್ತಲಿನ ಬದುಕು ಮತ್ತು ಸಮಕಾಲೀನ ಘಟನೆಗಳೇ ಉತ್ತಮ ಕಥೆಗಳ ಮೂಲವಾಗಬಹುದು ಎಂದು ತಿಳಿಸಿದರು.


ಐಐಟಿ ಹಳೆ ವಿದ್ಯಾರ್ಥಿನಿ ಹಾಗೂ 'ಬ್ರ್ಯಾಂಡ್ ಕ್ಯಾಮಿಯೋ' ಸಂಸ್ಥಾಪಕಿ ಕಾವ್ಯ ನಾಗೇಶ್ ಮಾತನಾಡಿ, "ಇಂದು ಸಿನಿಮಾದಲ್ಲಿ ಒಳ್ಳೆಯ ಕಥೆ ಹೇಳಿದರೆ ಮಾತ್ರ ಸಾಲದು; ಆ ಕಥೆಯನ್ನು ಪ್ರೇಕ್ಷಕರಿಗೆ ಹೇಗೆ ತಲುಪಿಸುತ್ತೇವೆ ಎಂಬುದೂ ಅಷ್ಟೇ ಮುಖ್ಯ" ಎಂದು ಅಭಿಪ್ರಾಯಪಟ್ಟರು. ಡಿಜಿಟಲ್ ಮಾರ್ಕೆಟಿಂಗ್, ಬ್ರ್ಯಾಂಡಿಂಗ್ ಹಾಗೂ ಸಾಮಾಜಿಕ ಜಾಲತಾಣಗಳ ಪರಿಣಾಮಕಾರಿ ಬಳಕೆಯ ಮೂಲಕವೇ ಕಂಟೆಂಟ್ ಹೆಚ್ಚು ಜನರನ್ನು ತಲುಪಲು ಸಾಧ್ಯ ಎಂದು ಅವರು ತಿಳಿಸಿದರು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂವಾದದಲ್ಲಿ ಸಕ್ರಿಯವಾಗಿ ಭಾಗವಹಿಸಿ ಚಿತ್ರರಂಗದ ಸೃಜನಾತ್ಮಕ ಹಾಗೂ ಮಾರುಕಟ್ಟೆ ಸಂಬಂಧಿತ ಆಯಾಮಗಳ ಕುರಿತು ಮೌಲ್ಯಯುತ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥ ಮಾಧವ ಹೊಳ್ಳ, ಸಹಾಯಕ ಪ್ರಾಧ್ಯಾಪಕಿ ತೇಜಸ್ವಿನಿ ಇನ್ನಿತರರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top