ಎಸ್‌ಡಿಎಂ ಕಾಲೇಜು ಉಜಿರೆ: ಶೈಕ್ಷಣಿಕ ವರ್ಷದ ಕ್ರೀಡಾ ಚಟುವಟಿಕೆಗಳಿಗೆ ಚಾಲನೆ

Upayuktha
0

 ಕ್ರೀಡಾ ಸಾಧನೆಗೆ ಶಿಸ್ತು ಮತ್ತು ನಿರಂತರ ಪರಿಶ್ರಮ ಅಗತ್ಯ: ಪ್ರೊ. ವಿಶ್ವನಾಥ್ ಪಿ 



ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ 2026–27ನೇ ಸಾಲಿನ ಶೈಕ್ಷಣಿಕ ವರ್ಷದ ಕ್ರೀಡಾ ಚಟುವಟಿಕೆಗಳಿಗೆ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು. 


ಕಾರ್ಯಕ್ರಮವನ್ನು ಎಸ್‌ಡಿಎಂ ಸ್ವಾಯತ್ತ ಕಾಲೇಜು, ಉಜಿರೆಯ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ.  ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ. ಕ್ರೀಡೆಯಲ್ಲಿ ಉನ್ನತ ಸಾಧನೆ ಮಾಡಲು ಶಿಸ್ತು, ಬದ್ಧತೆ ಹಾಗೂ ನಿರಂತರ ಪರಿಶ್ರಮ ಅತ್ಯಗತ್ಯವಾಗಿದ್ದು, ಕ್ರೀಡಾಪಟುಗಳು ತಮ್ಮ ಪ್ರತಿಭೆಯನ್ನು ಉತ್ತಮ ರೀತಿಯಲ್ಲಿ ಬೆಳೆಸಿಕೊಂಡು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವಂತೆ ಶುಭ ಹಾರೈಸಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್‌.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್. ಮಾತನಾಡಿ, ವಿದ್ಯಾರ್ಥಿಗಳಿಗೆ ಶುಭಾಶಯಗಳನ್ನು ತಿಳಿಸಿ, ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸುವಂತೆ ಕರೆ ನೀಡಿದರು.


ಕಾರ್ಯಕ್ರಮದಲ್ಲಿ ಕ್ರೀಡಾ ಸಂಘದ ವಿವಿಧ ಕ್ರೀಡೆಗಳ ತರಬೇತುದಾರರಾದ ಕೃಷ್ಣಾನಂದ ರಾವ್, ಸಂದೇಶ್, ಸಂಜೀವ ಕುಲಾಲ್, ಸುದೀನ್ ಪೂಜಾರಿ, ಜಸ್ವಂತ್ ಹಾಗೂ ವೀಕ್ಷಿತಾ ಹೆಮೋದರ್ ಸೇರಿದಂತೆ ಸಂಸ್ಥೆಯ ಕ್ರೀಡಾ ವಿದ್ಯಾರ್ಥಿಗಳು ಭಾಗಿಯಾಗಿದ್ದರು.


ಕಾರ್ಯಕ್ರಮದ ವೇದಿಕೆಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕಿ ಶಾರದಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ತೃತೀಯ ಬಿ.ಎ. ವಿದ್ಯಾರ್ಥಿನಿ ತನುಶ್ರೀ ನಿರೂಪಿಸಿ, ತೃತೀಯ ಬಿ.ಕಾಂ. ವಿದ್ಯಾರ್ಥಿನಿ ಪ್ರಿಯಾಂಕ ಸ್ವಾಗತಿಸಿ, ತೃತೀಯ ಬಿ.ಎ. ವಿದ್ಯಾರ್ಥಿ ಪ್ರವೀಣ್ ವಂದಿಸಿದರು.




ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top