ಉಜಿರೆ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ನಾನ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಿಕೊಟ್ಟಿದೆ. ಇದನ್ನು ಸಕ್ರೀಯವಾಗಿ ಬಳಸಿಕೊಂಡು ಭವಿಷ್ಯದ ಅವಕಾಶಗಳನ್ನು ಪಡೆದುಕೊಳ್ಳಬೇಕು. ವಿದ್ಯಾರ್ಥಿಗಳು ಜವಾಬ್ದಾರಿಯುತ ಪ್ರಜೆಗಳಾಗಳಾದ ಸಶಕ್ತ ಮತ್ತು ಸ್ವಸ್ಥ ಸಮಾಜ ನಿರ್ಮಾಣವಾಗುತ್ತದೆ. ಶೈಕ್ಷಣಿಕ ಸಾಧನೆಯೊಂದಿಗೆ ಸಾಮಾಜಿಕ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗುವ ವ್ಯಕ್ತಿತ್ವವನ್ನು ರೂಪಿಸಿಕೊಳ್ಳೋಣ ಎಂದು ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎ. ಜಯಕುಮಾರ್ ಶೆಟ್ಟಿ ಅಭಿಪ್ರಾಯಪಟ್ಟರು.
ಇವರು ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ಅರ್ಥ ಶಾಸ್ತ್ರ ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗದ ವತಿಯಿಂದ ಆಯೋಜಿಸಿದ್ದ ಇಕೋ-ವಿಷನ್ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ನಿರಂತರ ಪರಿಶ್ರಮ, ಅಭ್ಯಾಸ, ಶಿಸ್ತು ಮತ್ತು ಏಕತೆಯ ಮನೋಭಾವ ನಮ್ಮನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತವೆ. ಸಮಾಜವು ವಿದ್ಯಾವಂತರಿಂದ ಕೇವಲ ಪದವಿ ಅಲ್ಲ, ಉತ್ತಮ ಮೌಲ್ಯಗಳು, ಸೇವಾ ಮನೋಭಾವ ಮತ್ತು ಸಕಾರಾತ್ಮಕ ಬದಲಾವಣೆಯನ್ನು ನಿರೀಕ್ಷಿಸುತ್ತದೆ. ಪ್ರತಿಯೊಂದು ಚಟುವಟಿಕೆಯಲ್ಲೂ ಸಕ್ರಿಯವಾಗಿ ಭಾಗವಹಿಸಿ, ತಂಡದೊಂದಿಗೆ ಕೆಲಸ ಮಾಡುವ ಗುಣವನ್ನು ಬೆಳೆಸಿಕೊಳ್ಳಿ. ಇಂತಹ ಅನುಭವಗಳು ನಿಮ್ಮ ವ್ಯಕ್ತಿತ್ವ ವಿಕಸನಕ್ಕೆ ಭದ್ರ ಅಡಿಪಾಯವಾಗುತ್ತವೆ ಎಂದು ವಿಭಾಗದ ನೂತನ ವಿದ್ಯಾರ್ಥಿ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಶುಭ ಹಾರೈಸಿದರು. ಈ ಸಂಘವು ವಿದ್ಯಾರ್ಥಿಗಳಲ್ಲಿ ಪ್ರತಿಭೆ, ನಾಯಕತ್ವ ಮತ್ತು ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ಉತ್ತಮ ವೇದಿಕೆಯಾಗಲಿ ಎಂದರು.
ಕಾರ್ಯಕ್ರಮದಲ್ಲಿ ಅರ್ಥ ಶಾಸ್ತ್ರ ಮತ್ತು ಗ್ರಾಮೀಣ ಅಭಿವೃದ್ಧಿ ವಿಭಾಗದ ಮುಖ್ಯಸ್ಥ ಡಾ. ಗಣರಾಜ ಕೆ. ಪ್ರಾಸ್ತಾವಿಕ ಮಾತುಗಳನ್ನಾಡಿ ವಿಭಾಗದ ಶೈಕ್ಷಣಿಕ ಚಟುವಟಿಕೆಗಳ ಮಾಹಿತಿಯನ್ನು ಹಂಚಿಕೊಂಡರು. ಇಕೋ-ವಿಷನ್ ಸಂಘದ ವಿದ್ಯಾರ್ಥಿ ಸಂಚಾಲಕರಾಗಿ ತೃತೀಯ ಬಿ.ಎ. ವಿದ್ಯಾರ್ಥಿಗಳಾದ ನೆವಿಲ್ ಮತ್ತು ಕವನ ಸೇರಿದಂತೆ ಒಟ್ಟು 15 ವಿದ್ಯಾರ್ಥಿಗಳು ಪದಗ್ರಹಣ ಮಾಡಿದರು. ಬಳಿಕ ವಿದ್ಯಾರ್ಥಿಗಳು ರಚಿಸಿದ ಬಿತ್ತಿ ಪತ್ರಿಕೆಯ ಅನಾವರಣ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ವಿಭಾಗದ ಉಪನ್ಯಾಸಕರಾದ ಅಭಿನಂದನ್ ಜೈನ್ ಹಾಗು ನಾಗರಾಜ್ ಪೂಜಾರಿ ಸೇರಿದಂತೆ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಇಕೋ-ವಿಷನ್ ಸಂಘದ ಸಂಚಾಲಕ ಹಾಗೂ ಪ್ರಾಧ್ಯಾಪಕ ಡಾ. ಮಹೇಶ್ ಕುಮಾರ್ ಶೆಟ್ಟಿ ಎಚ್. ಕಾರ್ಯಕ್ರಮವನ್ನು ಸಂಯೋಜಿಸಿ ವಂದಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

