ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ‘ಚಿಗುರು' ಸಂಘ ಉದ್ಘಾಟನೆ

Upayuktha
0

 


ಉಜಿರೆ: ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ “ಚಿಗುರು ಸಂಘ’ದ ಉದ್ಘಾಟನೆ ಮತ್ತು ನೂತನ ವಿದ್ಯಾರ್ಥಿಗಳ ಪ್ರಶಿಕ್ಷಣ ಕಾರ್ಯಕ್ರಮ ‘ಆರಂಭ್’ ಇತ್ತೀಚೆಗೆ ನಡೆಯಿತು. 


'ಮಂಜುವಾಣಿ' ಮಾಸ ಪತ್ರಿಕೆಯ ಸಂಪಾದಕ ಡಾ. ಭಾಸ್ಕರ ಹೆಗಡೆ ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ವಿಭಾಗದ ಎಲ್ಲಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೇರೇಪಿಸಿದರು. ಅಲ್ಲದೆ, ಮಾಧ್ಯಮ ಕ್ಷೇತ್ರದಲ್ಲಿ ಯಶಸ್ಸು ಗಳಿಸಲು ಬಲವಾದ ವೃತ್ತಿಪರ ಪೋರ್ಟ್‌ಫೋಲಿಯೊ ಬೆಳೆಸಿಕೊಳ್ಳುವುದು ಎಷ್ಟು ಮುಖ್ಯ ಎಂಬುದನ್ನು ವಿವರಿಸಿದರು.


ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಬರೆದು, ರಾಜ್ಯದ ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದ ಲೇಖನಗಳ ಸಂಕಲನವನ್ನು ಬಿಡುಗಡೆ ಮಾಡಲಾಯಿತು. ಜೊತೆಗೆ ವಿಭಾಗದ ವೈವಿಧ್ಯಮಯ ಚಟುವಟಿಕೆಗಳನ್ನು ಬಿಂಬಿಸುವ ವಿಶೇಷ ‘ಭಿತ್ತಿ ಪತ್ರಿಕೆ'ಯನ್ನು ಅನಾವರಣಗೊಳಿಸಲಾಯಿತು.


ಕಾರ್ಯಕ್ರಮದಲ್ಲಿ ಡಾ. ಭಾಸ್ಕರ್ ಹೆಗಡೆ ದ್ವಿತೀಯ ಬಿ.ಎ. ಪತ್ರಿಕೋದ್ಯಮ ವಿದ್ಯಾರ್ಥಿನಿ ರಮ್ಯಾ ಅವರಿಗೆ ವೈಯಕ್ತಿಕವಾಗಿ ವಿದ್ಯಾರ್ಥಿವೇತನ ನೀಡಿ, ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಸುನಿಲ್ ಹೆಗ್ಡೆ, ಎಸ್.ಡಿ.ಎಂ ಮಲ್ಟಿಮೀಡಿಯಾ ಸ್ಟುಡಿಯೋದ ಸೀನಿಯರ್ ಪ್ರೊಡಕ್ಷನ್ ಅಸೋಸಿಯೇಟ್ ಸಂಹಿತಾ ಎಸ್. ಮೈಸೂರೆ, 'ರೇಡಿಯೋ ನಿನಾದ 90.4' ರ ಮುಖ್ಯಸ್ಥ ವಿ. ಕೆ. ಕಡಬ, ಕಾರ್ಯಕ್ರಮ ಸಂಯೋಜಕ ಸಂತೋಷ್, ಇ – ಲೆಕ್ಚರ್ ಸಂಯೋಜಕ ಕುಮಾರೇಶ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.


ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top