ಎಸ್.ಡಿ.ಎಂ ಕಾಲೇಜು ಉಜಿರೆ: 'ರಾಜ್ಯರಂಗ' ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Upayuktha
0

ವಿದ್ಯಾರ್ಥಿ ರಚನೆಯ ಭಿತ್ತಿ ಪತ್ರಿಕೆ ಅನಾವರಣ ಹಾಗೂ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ



ಉಜಿರೆ: ವಿದ್ಯಾರ್ಥಿ ಸಮೂಹ ನಕರಾತ್ಮಕ ಚಿಂತನೆಗಳಿಂದ ದೂರವಿದ್ದು, ಏಕಾಗ್ರತೆಯನ್ನು ಬೆಳೆಸಿಕೊಳ್ಳುವುದರ ಜೊತೆಗೆ ಮೌಲ್ಯಯುತ ಜೀವನವನ್ನು ನಮ್ಮದಾಗಿಸಿಕೊಳ್ಳಬೇಕು. ನಮ್ಮೊಳಗಿನ ಸಣ್ಣ ಪ್ರತಿಭೆಯೂ ಮುಂದೊಂದು ದಿನ ಹೆಮ್ಮರವಾಗಬವುದು. ವಿದ್ಯಾರ್ಥಿ ಜೀವನಲ್ಲಿನ ಪಠ್ಯೇತರ ಚಟುವಟಿಕೆಗಳು ಪ್ರತಿಭಾ ಅನಾವರಣಕ್ಕಿರುವ ಬಹುದೊಡ್ಡ ವೇದಿಕೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್ ಅಭಿಪ್ರಾಯಪಟ್ಟರು. 


ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ಆಯೋಜಿಸಿದ್ದ 'ರಾಜ್ಯ ರಂಗ' ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.


ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ನಾನ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಿಕೊಟ್ಟಿದೆ. ಮನುಷ್ಯನ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣ ಬಹುಮುಖ್ಯ. ಭವಿಷ್ಯವನ್ನು ಶಸಕ್ತಗೊಳಿಸಲು ವಿದ್ಯಾರ್ಥಿಗಳು ಜ್ಞಾನದ ಮೈಲಿಗಲ್ಲನ್ನು ಸ್ಥಾಪಿಸುವ ಜೊತೆಗೆ ಕೌಶಲ್ಯ ಭರಿತರಾಗಿ ರೂಪುಗೊಳ್ಳಬೇಕು. ಸವಾಲುಗಳನ್ನು ನಿವಾರಿಸುವ ನಾಯಕತ್ವ ಗುಣವನ್ನು ಬೆಳೆಸಿಕೊಂಡು ಉನ್ನತ ಮಟ್ಟದ ವ್ಯಕ್ತಿತ್ವವನ್ನು ನಮ್ಮದಾಗಿಸಿಕೊಳ್ಳಬೇಕು. 


ಪ್ರತಿಯೊಂದು ಕ್ಷೇತ್ರವೂ ನಮ್ಮೊಳಗಿನ ಕೌಶಲ್ಯ ಮತ್ತು ಪ್ರತಿಭೆಯನ್ನು ನಿರೀಕ್ಷಿಸುತ್ತದೆ. ಆ ಹಾದಿಯಲ್ಲಿ ನಡೆದಾಗ ಅವಕಾಶಗಳು ತೆರೆದುಕೊಳ್ಳುತ್ತದೆ. ಆ ಅವಕಾಶಗಳು ಉತ್ತಮ ಉದ್ಯೋಗವನ್ನು ಕಂಡುಕೊಳ್ಳಲು ಸಹಕಾರಿಯಾಗುತ್ತದೆ ಎಂದು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಕಾರ್ಯಕ್ರಮವನ್ನು ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ನಟರಾಜ್ ಎಚ್ ಕೆ ಮಾತನಾಡಿ, ಕಾಲೇಜಿನಲ್ಲಿ ರಾಜ್ಯ ಶಾಸ್ತ್ರ ವಿಭಾಗದ ವತಿಯಿಂದ ಪ್ರತಿ ವರ್ಷವೂ ಮಾದರಿ ಸಂಸತ್ತಿನಂತಹ ವಿಶೇಷ ಪ್ರಾಯೋಗಿಕ ಚಟುವಟಿಕೆಗಳ ಜೊತೆಗೆ ಗ್ರಾಮ ಪಂಚಾಯತ್, ಆರಕ್ಷಕ ಠಾಣೆ, ನ್ಯಾಯಾಲಯ ಇತ್ಯಾದಿ ಸರ್ಕಾರಿ ಕಛೇರಿಗಳಿಗೆ ವಿದ್ಯಾರ್ಥಿ ಸಮೂಹದೊಂದಿಗೆ ಭೇಟಿ ಕೊಟ್ಟು ಪ್ರಾಯೋಗಿಕ ಅನುಭವವನ್ನು ನೀಡಲು ಅನುವು ಮಾಡಿಕೊಡಲಾಗಿದೆ. ಇಂತಹ ಪಠ್ಯೇತರ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನದ ಜೊತೆಗೆ ಪ್ರಸ್ತುತ ವಿದ್ಯಮಾನಗಳನ್ನು ಅರಿತುಕೊಳ್ಳಲು ಸಹಕಾರಿಯಾಗಲಿದೆ ಎಂದರು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ರಚನೆಯ 'ರಾಜ್ಯ ರಂಗ- 2026' ಭಿತ್ತಿ ಪತ್ರಿಕೆಯನ್ನು ಅನಾವರಣಗೊಳಿಸಿದರು. 


ವೇದಿಕೆಯಲ್ಲಿ ವಿಭಾಗದ ಉಪನ್ಯಾಸಕ ಡಾ. ಶಿವಕುಮಾರ್ ಪಿ ಪಿ ಸೇರಿದಂತೆ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು. ವಿಭಾಗದ ಹೆಚ್ಚಿನ ವಿದ್ಯಾರ್ಥಿಗಳು ಸೇರಿದಂತೆ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ತನು ಕೆ ಸಿ ಹೆಗ್ಡೆ ನಿರೂಪಿಸಿ, ವಂದಿಸಿದರು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top