ಎಸ್.ಡಿ.ಎಂ. ಡಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ, ವಿಷಯವಾರು ಸಂಘಗಳ ಉದ್ಘಾಟನೆ

Upayuktha
0

 


ಉಜಿರೆ: ಎಸ್.ಡಿ.ಎಂ. ಡಿ.ಎಡ್. ಕಾಲೇಜಿನಲ್ಲಿ ಸ್ವಾಗತ ಕಾರ್ಯಕ್ರಮ, ವಿದ್ಯಾರ್ಥಿ ಸಂಘ ಮತ್ತು ವಿಷಯವಾರು ಸಂಘಗಳ ಉದ್ಘಾಟನಾ ಸಮಾರಂಭ ಜುಲೈ 10 ರಂದು ನಡೆಯಿತು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆಪೇಟೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸಾವಿತ್ರಿ ಕಾರ್ಯಕ್ರಮ ಉದ್ಘಾಟಿಸಿದರು.


ನಂತರ ಮಾತನಾಡಿ ವಿದ್ಯಾರ್ಥಿ ಸಂಘವು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುತ್ತದೆ. ನಮ್ಮ ರಾಷ್ಟ್ರದ ಪ್ರಗತಿಗೆ ವಿದ್ಯಾವಂತರು ಮಾತ್ರವಲ್ಲ ಮೌಲ್ಯವಂತರೂ ಕೂಡಾ ಅಗತ್ಯ. ಆದ್ದರಿಂದ ಸತ್ಯ, ಪ್ರಾಮಾಣಿಕತೆ, ಶಿಸ್ತು, ದೇಶಪ್ರೇಮ ಮತ್ತು ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ. ಆತ್ಮವಿಶ್ವಾಸ ಸದಾ ನಿಮ್ಮಲ್ಲಿ ತುಂಬಿರಲಿ ಎಂದು ಹೇಳಿದರು. ಪ್ರಸ್ತುತವಾಗಿ ಪ್ರಾಥಮಿಕ ಶಾಲೆಗಳಲ್ಲಿ ಮೌಲ್ಯಗಳನ್ನು ಒಳಗೊಂಡ ಪಠ್ಯಕ್ರಮವನ್ನು ಮಗುವಿನ ಸರ್ವತೋಮುಖವಾದ ಬೆಳವಣಿಗೆಗೆ ಅನುಗುಣವಾಗಿ ಸೇರಿಸಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ ಸೇವಾ ಮನೋಭಾವಕ್ಕೆ ಹೊಸ ದಿಕ್ಕನ್ನು ನೀಡುವ ಮಹತ್ವದ ಘಟ್ಟವಾಗಿದೆ. ಈ ಘಟ್ಟವು ವಿದ್ಯಾರ್ಥಿ ಜೀವನದ ವ್ಯಕ್ತಿತ್ವ ನಿರ್ಮಾಣದ ಅತ್ಯಂತ ಅಮೂಲ್ಯವಾದ ಸಮಯ. ಈ ಹಂತದಲ್ಲಿ ವಿದ್ಯಾರ್ಥಿಯು ಗಳಿಸಿಕೊಳ್ಳುವ ಜ್ಞಾನ, ಕೌಶಲ್ಯ, ಮೌಲ್ಯಗಳು ಮತ್ತು ಅನುಭವಗಳು ಜೀವನದ ಭದ್ರ ಬುನಾದಿಯಾಗಬಲ್ಲದು ಎಂದು ಹೇಳಿದರು. ವಿದ್ಯಾರ್ಥಿ ಸಂಘದ ವಿವಿಧ ವಿಭಾಗಗಳಿಗೆ ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ಆಯ್ಕೆಯಾದವರಿಗೆ ಜವಾಬ್ದಾರಿಯ ಸ್ಥಾನದಲ್ಲಿದ್ದೀರಿ ಎಂಬುದನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಿ ಎಂದು ಹೇಳಿದರು.


ಸಹಾಯಕ ಪ್ರಾಧ್ಯಾಪಕ ಮಂಜು ಆರ್ ಮಾತನಾಡಿ ವಿದ್ಯಾರ್ಥಿ ಸಂಘವು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಧ್ವನಿಯಾಗಿದೆ. ಇಲ್ಲಿ ಪ್ರತಿಯೊಬ್ಬರು ನಾಯಕತ್ವ ಮತ್ತು ಸಂಘಟನೆಯ ಗುಣಗಳನ್ನು ಬೆಳೆಸಿಕೊಳ್ಳುತ್ತಾರೆ. ನೀವೆಲ್ಲರೂ ದೊಡ್ಡ ದೊಡ್ಡ ಕನಸುಗಳನ್ನು ಕಾಣಿರಿ. ಆದರ್ಶ ಗುಣಗಳನ್ನು ಬೆಳೆಸಿಕೊಳ್ಳಿ ಎಂದು ಪ್ರಾಸ್ತವಿಕ ನುಡಿಗಳನ್ನು ತಿಳಿಸಿದರು.


ವೇದಿಕೆಯಲ್ಲಿ ವಿದ್ಯಾರ್ಥಿ ನಾಯಕಿ ದೀಪಿಕಾ ಹಾಗೂ ಉಪನಾಯಕಿ ಫಾತಿಮಾತ್ ಸಫಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು, ಪ್ರಥಮ ಮತ್ತು ದ್ವಿತೀಯ ಡಿ.ಎಡ್. ನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಪ್ರಶಿಕ್ಷಣಾರ್ಥಿಗಳಾದ ಯಜ್ಞಶ್ರೀ ಮತ್ತು ತಂಡ ಪ್ರಾರ್ಥಿಸಿ, ಸುಮಯ್ಯ ಸ್ವಾಗತಿಸಿ, ರಂಝೀನಾ ವಂದಿಸಿ, ಹುಲಿಗೆವ್ವ ಅತಿಥಿ ಪರಿಚಯ ಮಾಡಿದರು. ಶಿಫಾನ ಮತ್ತು ರಾಯಿಝ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top