ಉಜಿರೆ ಎಸ್‌ಡಿಎಂ ಪ.ಪೂ ಕಾಲೇಜು: ತೊರವೆ ರಾಮಾಯಣದ ಗಮಕ ವಾಚನ

Upayuktha
0



ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತ, ಹಿಂದಿ ಹಾಗೂ ಕನ್ನಡ ಭಾಷೆಗಳ ಭಾಷಾ ವೇದಿಕೆಯಾದ  'ಸಂಹಿಕ'ದ ವತಿಯಿಂದ ಹಳಗನ್ನಡ ಭಾಷೆ, ಕಾವ್ಯಗಳ ಪರಿಚಯದ ಉದ್ದೇಶದಿಂದ ತೊರವೆ ರಾಮಾಯಣದಿಂದ ಆಯ್ದ 'ತಾಟಕಿ ವಧೆ ಹಾಗೂ ಅಹಲ್ಯಮೋಕ್ಷ' ಎಂಬ ಕಥಾ ಭಾಗವನ್ನು ಗಮಕ ವಾಚನ ಪ್ರವಚನದ ಮೂಲಕ ಪ್ರಸ್ತುತಪಡಿಸಲಾಯಿತು. 


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಬಿ ಇವರು ವಿನೂತನ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. 


ವಾಚನಕಾರರಾಗಿ ಸಂಖ್ಯಾಶಾಸ್ತ್ರ ಉಪನ್ಯಾಸಕಿ ಅಮೃತಾ ಎನ್, ಪ್ರವಚನದಲ್ಲಿ ಶ್ರೀರಾಮನಾಗಿ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್, ವಿಶ್ವಾಮಿತ್ರರಾಗಿ ಕನ್ನಡ ಭಾಷಾ ಉಪನ್ಯಾಸಕ ಡಾ.ಮಹಾವೀರ ಜೈನ್ ಇಚ್ಲಂಪಾಡಿ ಇವರು ಭಾಗವಹಿಸಿದರು. 


ಸಭಾ ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ರಾಜೇಶ್ ಬಿ, ಸಂಸ್ಕೃತ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನ ಕುಮಾರ ಐತಾಳ್, ಹಿಂದಿ ವಿಭಾಗದ ಮುಖ್ಯಸ್ಥರಾದ ನಾಗರಾಜ ಭಂಡಾರಿ ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top