ಧರ್ಮತ್ತಡ್ಕ: ಶ್ರೀ ದುರ್ಗಾಪರಮೇಶ್ವರೀ ಏಡೆಡ್ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆಯು ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಪಿಟಿಎ ಅಧ್ಯಕ್ಷ ಅಶೋಕ್ ಭಂಡಾರಿ ಕುಡಾಲು ವಹಿಸಿದ್ದರು. ವೇದಿಕೆಯಲ್ಲಿ ಪ್ರಾಂಶುಪಾಲ ಸತೀಶ್ ಕುಮಾರ್ ಶೆಟ್ಟಿ, ಮ್ಯಾನೇಜರ್ ಶಂಕರನಾರಾಯಣ ಭಟ್, ವಿಶ್ರಾಂತ ಪ್ರಾಂಶುಪಾಲ ರಾಮಚಂದ್ರ ಭಟ್, ಮಾತೃ ಮಂಡಳಿ ಅಧ್ಯಕ್ಷೆ ದಿವ್ಯಭಾರತಿ, ಮುಖ್ಯೋಪಾಧ್ಯಾಯ ಶಶಿಕುಮಾರ್ ಪಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ಸಭೆಯಲ್ಲಿ ನೂತನ ಕಾರ್ಯಕಾರಿ ಸಮಿತಿ ರಚನೆಗೊಂಡು 2026-27ನೇ ಶೈಕ್ಷಣಿಕ ವರ್ಷಕ್ಕೆ ರಕ್ಷಕ-ಶಿಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ದಿನೇಶ್ ಚೆರುಗೋಳಿ, ಉಪಾಧ್ಯಕ್ಷರಾಗಿ ಅಶ್ರಫ್ ಸೋಕೆ, ಮಾತೃ ಮಂಡಳಿಯ ಅಧ್ಯಕ್ಷೆಯಾಗಿ ಪಾವನ ಎಸ್, ಉಪಾಧ್ಯಕ್ಷೆಯಾಗಿ ಲತಾ ಅವಿರೋಧವಾಗಿ ಆಯ್ಕೆಗೊಂಡರು.
ಶಿಕ್ಷಕ ಉಣ್ಣಿಕೃಷ್ಣನ್ ಪ್ರಾರ್ಥನೆ ಹಾಡಿದರು. ಶ್ವೇತಾ ಕುಮಾರಿ ವರದಿ ವಾಚಿಸಿ, ಜಗದೀಶನ್ ಸ್ವಾಗತಿಸಿ, ನಿವೇದಿತಾ ವಂದಿಸಿದರು. ಚೇತನಾ ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


