ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್‌ ಗೆ ಚಾಲನೆ

Upayuktha
0


 

ಮಂಗಳೂರು: ಇಂದಿನಿಂದ ರಾಜ್ಯಾದ್ಯಂತ ಎಸ್ಐಆರ್ ಪ್ರಕ್ರಿಯೆ ಆರಂಭಗೊಂಡಿದ್ದು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಧಿಕಾರಿಗಳ ಸಮ್ಮುಖದೊಂದಿಗೆ ಶಾಸಕ ವೇದವ್ಯಾಸ ಕಾಮತ್  ಚಾಲನೆ ನೀಡಿದರು. 


ನಂತರ ಮಾತನಾಡಿದ ಶಾಸಕರು, ಇಂದಿನಿಂದ ಒಂದು ತಿಂಗಳುಗಳ ಕಾಲ ಬಿಎಲ್ಒ ಗಳು ಮನೆ ಮನೆಗೆ ಬರಲಿದ್ದು ಅವರು ನೀಡುವ ನಮೂನೆಗಳನ್ನು ಅಗತ್ಯ ದಾಖಲೆಗಳೊಂದಿಗೆ ಸರಿಯಾಗಿ ಭರ್ತಿ ಮಾಡಿ, ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಿ. 18 ವರ್ಷ ತುಂಬಿದವರು, ಬೇರೆ ಕಡೆಯಿಂದ ಇಲ್ಲಿ ಬಂದು ನೆಲೆಸಿರುವವರಿಗೂ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಲು ಅವಕಾಶವಿದೆ. ಯಾವುದೇ ಒಬ್ಬ ಅರ್ಹನೂ ಸಹ ತನ್ನ ಮತದಾನದ ಹಕ್ಕನ್ನು ಕಳೆದುಕೊಳ್ಳದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ನಾನು ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದು, ನೀವೂ ಸಹ ಭಾಗಿಯಾಗಿ ಬಲಿಷ್ಠ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಕೈಜೋಡಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.


ಈ ವೇಳೆ ಪಾಲಿಕೆ ಆಯುಕ್ತರಾದ ರವಿಚಂದ್ರ ನಾಯಕ್, ಉಪ ಆಯುಕ್ತರಾದ (ಅಭಿವೃದ್ಧಿ) ನರೇಶ್ ಶೆಣೈ, ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಾದ ಅಕ್ಷತಾ, ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top