ಆತ್ಮವಿಶ್ವಾಸವೇ ಸಾಧನೆಗೆ ಹಾದಿ: ಡಾ. ಅರವಿಂದ್ ಪಟೇಲ್

Upayuktha
0



ಬಳ್ಳಾರಿ: ವೀರಶೈವ ವಿದ್ಯಾವರ್ಧಕ ಸಂಘದ ಎನ್.ಎಂ. ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ನಡೆಯಿತು.


ಖ್ಯಾತ ವೈದ್ಯರು ಹಾಗೂ ವೀ ವಿ ಸಂಘದ ಕಾರ್ಯದರ್ಶಿ ಡಾ. ಅರವಿಂದ್ ಪಟೇಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕಗಳು ಬರಲಿಲ್ಲ, ವೈದ್ಯಕೀಯ ಶಿಕ್ಷಣದಲ್ಲಿ ಸೀಟು ದೊರೆಯಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದಕ್ಕೆ ಮುಖ್ಯ ಕಾರಣ ಆತ್ಮವಿಶ್ವಾಸದ ಕೊರತೆ. ಜೀವನದಲ್ಲಿ ಸೋಲು ಅಂತಿಮವಲ್ಲ; ಬದುಕಲು ನೂರಾರು ದಾರಿಗಳಿವೆ. ಅವುಗಳನ್ನು ಗುರುತಿಸಿ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ಆತ್ಮವಿಶ್ವಾಸವೇ ಸಾಧನೆಯ ನಿಜವಾದ ಹಾದಿ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ವೀರಶೈವ ವಿದ್ಯಾವರ್ಧಕ ಸಂಘದ ಸಹಕಾರ್ಯದರ್ಶಿ ಮೇಟಿ ಪಂಪನಗೌಡ, ಕೋಶಾಧಿಕಾರಿ ಬೈಲುವದ್ದಿಗೇರಿ ಎರ್ರಿಸ್ವಾಮಿ, ಕಾರ್ಯಕಾರಿ ಮಂಡಳಿ ಸದಸ್ಯರಾದ ಚೋರನೂರು ಕೊಟ್ರಪ್ಪ, ಮಿಂಚೇರಿ ನರೇಂದ್ರಬಾಬು, ಕಾತ್ಯಾಯಿನಿ, ಮರಿದೇವಯ್ಯ, ಏಳುಬೆಂಚಿ ರಾಜಶೇಖರ್ ಉಪಸ್ಥಿತರಿದ್ದು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಸ್ಥಾಪಕ ಪ್ರಾಚಾರ್ಯ ಹಾಗೂ ನೀಟ್ ತರಬೇತುದಾರ ಚಿಗುರು ಡಿ ಪ್ರಕಾಶ್ ಮತ್ತು ಕಾಲೇಜಿನ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕಿ ಡಾ. ಸುಚೇತಾ ಪೈ ಅವರು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಹಾಗೂ ಜೀವನೋತ್ಸಾಹ ತುಂಬುವ ಸಂದೇಶಗಳನ್ನು ನೀಡಿದರು.

ಪದವಿಪೂರ್ವ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪದಕ, ಪ್ರಶಸ್ತಿ ಹಾಗೂ ಪಾರಿತೋಷಕಗಳನ್ನು ನೀಡಿ ಗೌರವಿಸಲಾಯಿತು. ದೊಡ್ಡ ಬಸವ ಗವಾಯಿಗಳ ಸಂಗೀತ ಬಳಗದಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿಯ ಅಧ್ಯಕ್ಷ ಮುಂಡಾಸದ ಚೆನ್ನಬಸವರಾಜ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ, ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವನ್ನು ಹಾರೈಸಿದರು.

ಆಡಳಿತ ಮಂಡಳಿಯ ಸದಸ್ಯ ಎಂ. ಗಿರಿಜಾಪತಿ ಅತಿಥಿಗಳನ್ನು ಸ್ವಾಗತಿಸಿ, ಪ್ರಾಚಾರ್ಯ ಎ.ಎಂ.ಪಿ. ವೀರೇಶಸ್ವಾಮಿ ಪ್ರಾಸ್ತಾವಿಕ ನುಡಿನ್ನಾಡಿದರು. ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉಪನ್ಯಾಸಕರಾದ ಕೆ.ಎಂ. ಮಂಜುನಾಥ್ ಹಾಗೂ ಕಾರ್ತೀಕ ಮನಸಾಲಿ ನಿರ್ವಹಿಸಿದರು. ಉಪನ್ಯಾಸಕಿಯರಾದ ತಾರಾ ಹಿರೇಮಠ್ ಮತ್ತು ಪಲ್ಲವಿ ಕೆ.ಎಸ್. ಅತಿಥಿಗಳನ್ನು ಪರಿಚಯಿಸಿದರು. ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಉಪನ್ಯಾಸಕಿ ಪ್ರಿಯಾಂಕ ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಉಪನ್ಯಾಸಕ ನಾಡಗೌಡ ವೀರೇಂದ್ರಗೌಡ ನಿರೂಪಿಸಿದರು. ಶೈಕ್ಷಣಿಕ ಸಂಯೋಜಕರಾದ ಅಬಿದ್ ಅಲಿ ವಂದನಾರ್ಪಣೆ ಸಲ್ಲಿಸಿದರು.


ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಪೋಷಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸಮಾರಂಭದ ನಂತರ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿ ಎಲ್ಲರ ಮನಸೂರೆಗೊಂಡವು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top