ಸೀನಿಯರ್ ನ್ಯಾಶನಲ್ ನೆಟ್ಬಾಲ್ ಪಂದ್ಯಾಟ: ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

Upayuktha
0

 ರಾಜ್ಯವನ್ನು ಪ್ರತಿನಿಧಿಸಿದ 3 ಜನ ವಿದ್ಯಾರ್ಥಿಗಳು 



ಉಜಿರೆ: ಇತ್ತೀಚೆಗೆ ಪುದುಚೇರಿಯ ವಾಸವಿ ಇಂಟರ್‌ನ್ಯಾಶನಲ್ ಸ್ಕೂಲ್ ನಲ್ಲಿ ನಡೆದ 5ನೇ ಆವೃತ್ತಿಯ ಫಾಸ್ಟ್- 5 ಸೀನಿಯರ್ ನ್ಯಾಶನಲ್ ನೆಟ್ಬಾಲ್ ಪಂದ್ಯಾವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಹಾಗು ಎಸ್.ಡಿ.ಎಂ ಕ್ರೀಡಾ ಸಂಘದ ಮೂರು  ವಿದ್ಯಾರ್ಥಿಗಳು ವಿಶೇಷ ಸಾಧನೆ ಮೆರೆದಿದ್ದಾರೆ.


ರಾಜ್ಯ ತಂಡವನ್ನು ಪ್ರತಿನಿಧಿಸಿದ ರಾಷ್ಟ್ರೀಯ ಮಟ್ಟದ ನೆಟ್ಬಾಲ್ ಚಾಂಪಿಯನ್‌ಶಿಪ್ನಲ್ಲಿ ಉಜಿರೆಯ ಎಸ್‌.ಡಿ.ಎಂ ಕಾಲೇಜಿನ ದ್ವಿತೀಯ ವರ್ಷದ ಎಂ ಎಸ್ ಡಬ್ಲ್ಯೂ ವಿಭಾಗದ ವಿದ್ಯಾರ್ಥಿ ಪುನೀತ್, ರಶ್ಮಿ ಎಸ್ ಹಾಗೂ ಪ್ರಥಮ ವರ್ಷದ ಎಂಕಾಂ ವಿದ್ಯಾರ್ಥಿನಿ ಸುರಕ್ಷಾ ಆಚಾರ್ಯ ಭಾಗವಹಿಸಿದ್ದರು. ಕ್ರೀಡಾಪಟುಗಳಿಗೆ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ಪುಜಾರಿ ತರಬೇತಿ ನೀಡಿರುತ್ತಾರೆ.


ರಾಷ್ಟ್ರ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಕಾಲೇಜಿನ ಪ್ರಾಂಶುಪಾಲ ಪ್ರೋ. ವಿಶ್ವನಾಥ್ ಪಿ, ಎಸ್.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್, ಉಪನ್ಯಾಸಕರು ಸೇರಿದಂತೆ ಸಿಬ್ಬಂದಿವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ತಿಳಿಸಿರುತ್ತಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top