ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ಕನ್ನಡ ಸಂಘ ಉದ್ಘಾಟನೆ

Upayuktha
0

 



ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ 2026-27ನೇ ಶೈಕ್ಷಣಿಕ ವರ್ಷದ ಕಾರ್ಯಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. 


ಸಂಘದ ಕಾರ್ಯಚಟುವಟಿಕೆಗಳ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ  ಡಾ.ಎಂ.ಪಿ. ಶ್ರೀನಾಥ್ ನೆರವೇರಿಸಿ ಮಾತನಾಡಿ, ಕನ್ನಡ ಸಂಘವು ಕೇವಲ ವಿದ್ಯಾರ್ಥಿಗಳ ಒಗ್ಗೂಡುವುದಕ್ಕಾಗಿ ಮಾತ್ರ ಸೀಮಿತವಾಗದೇ, ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಸಾಹಿತ್ಯ ಪ್ರತಿಭೆಗಳ ಬೆಳವಣಿಗೆಯ ವೇದಿಕೆಯಾಗಬೇಕು ಎಂದು ಅಭಿಪ್ರಾಯಪಟ್ಟರು.

         

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಮೋದ್‌ ಕುಮಾರ್‌ ಬಿ. ವಹಿಸಿದ್ದರು . ಕಾಲೇಜಿನ ಉಪಪ್ರಾಚಾರ್ಯರು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥ ಡಾ. ರಾಜೇಶ್‌ ಬಿ ಕನ್ನಡ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.


ಪ್ರಸ್ತುತ ವರ್ಷದ ಕನ್ನಡ ಸಂಘದ ಅಧ್ಯಕ್ಷರಾಗಿ ಸ್ಫೂರ್ತಿ - ದ್ವಿತೀಯ ಪಿಯುಸಿ ಕಲಾವಿಭಾಗ ಆಯ್ಕೆಗೊಂಡರೆ, ಪ್ರಿಯಾಂಕಾ - ದ್ವಿತೀಯ ಪಿಯುಸಿ ಕಲಾ ವಿಭಾಗ, ಕಾರ್ಯದರ್ಶಿ, ಪ್ರೀತಮ್‌ - ದ್ವಿತೀಯ ಪಿಯುಸಿ ಕಲಾವಿಭಾಗ, ಜೊತೆ ಕಾರ್ಯದರ್ಶಿ ಮತ್ತು ವಿನಾಯಕ್‌ - ದ್ವಿತೀಯ ಪಿಯುಸಿ ಕಲಾವಿಭಾಗ ಹಾಗೂ ಪ್ರಥಮ ಪಿಯುಸಿ ಕಲಾವಿಭಾಗದ ಸನ್ನಿಧಿ & ಬಿಂಬ ಇವರು ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

 ಸ್ಫೂರ್ತಿ ಅತಿಥಿಗಳನ್ನು ಸ್ವಾಗತಿಸಿ, ಪ್ರಿಯಾಕಾ ವಂದಿಸಿದರು. ತುಳಸಿ ಕಾರ್ಯಕ್ರಮ ನಿರ್ವಹಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top