ಶ್ರೀನಿವಾಸ್ ವಿಶ್ವವಿದ್ಯಾಲಯ: 'ಪಿಕ್ ಅಂಡ್ ಸ್ಪೀಚ್' ಸ್ಪರ್ಧೆ

Upayuktha
0

 


ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ ಇನ್‌ಸ್ಟಿಟ್ಯೂಟ್ ಆಫ್ ಏವಿಯೇಷನ್ ಸ್ಟಡೀಸ್ ವತಿಯಿಂದ ಜುಲೈ 14ರಂದು ಬಿಬಿಎ ಏವಿಯೇಷನ್ ಮ್ಯಾನೇಜ್‌ಮೆಂಟ್ ಹಾಗೂ ಬಿಬಿಎ ಏವಿಯೇಷನ್ ಅಂಡ್ ಲಾಜಿಸ್ಟಿಕ್ಸ್ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳಿಗಾಗಿ 'ಪಿಕ್ ಅಂಡ್ ಸ್ಪೀಚ್' ಸ್ಪರ್ಧೆಯನ್ನು ಆಯೋಜಿಸಲಾಯಿತು.


ಸಾರ್ವಜನಿಕ ಭಾಷಣ ಕೌಶಲ್ಯ, ಆತ್ಮವಿಶ್ವಾಸ, ತ್ವರಿತ ಚಿಂತನೆ ಮತ್ತು ವಿಶ್ಲೇಷಣಾತ್ಮಕ ಸಾಮರ್ಥ್ಯವನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಒಟ್ಟು 53 ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಚೀಟಿ ಎತ್ತುವ ಮೂಲಕ ಆಯ್ಕೆಯಾದ ನಿರ್ವಹಣಾ ವಿಷಯಗಳ ಕುರಿತು ವಿದ್ಯಾರ್ಥಿಗಳು ತಮ್ಮ ವಿಚಾರಗಳನ್ನು ಆತ್ಮವಿಶ್ವಾಸದಿಂದ ಮಂಡಿಸಿ ಮೆಚ್ಚುಗೆ ಗಳಿಸಿದರು.


ಸ್ಪರ್ಧೆಯಲ್ಲಿ ದ್ವಿತೀಯ ವರ್ಷದ ಬಿಬಿಎ ಏವಿಯೇಷನ್ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿ ಆದಿತ್ಯ ಬಿ. ಗೌಡ ಪ್ರಥಮ ಸ್ಥಾನ, ಪ್ರಥಮ ವರ್ಷದ ಬಿಬಿಎ ಏವಿಯೇಷನ್ ಅಂಡ್ ಲಾಜಿಸ್ಟಿಕ್ಸ್ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿ ಅಮೋಘ್ ಹೆಗ್ಡೆ ದ್ವಿತೀಯ ಸ್ಥಾನ ಹಾಗೂ ಶೌರ್ಯ ತೃತೀಯ ಸ್ಥಾನ ಪಡೆದರು.


ವಿಜೇತರಿಗೆ ಅಧ್ಯಾಪಕರು ಹಾಗೂ ಸಹಪಾಠಿಗಳು ಅಭಿನಂದನೆ ಸಲ್ಲಿಸಿದರು. ಡೀನ್ ಡಾ. ಪವಿತ್ರಾ ಕುಮಾರಿ, ಎಸ್‌ಡಬ್ಲ್ಯುಒ, ವಿಭಾಗ ಮುಖ್ಯಸ್ಥರು, ಮ್ಯಾನೇಜ್‌ಮೆಂಟ್ ಕೋ-ಆರ್ಡಿನೇಟರ್, ಅಧ್ಯಾಪಕರು, ವಿದ್ಯಾರ್ಥಿ ಸ್ವಯಂಸೇವಕರು ಮತ್ತು ಸಿಬ್ಬಂದಿಯ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top