ಬೆಂಗಳೂರು: ಬೆಂಗಳೂರಿನ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯ, 2024-25ನೇ ಶೈಕ್ಷಣಿಕ ಸಾಲಿನ ಕ್ರೀಡಾ ಕ್ಷೇತ್ರದಲ್ಲಿ ತೋರಿದ ಅತ್ಯುತ್ತಮ ಸಾಧನೆಗಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕ್ರೀಡಾ ಉತ್ತೇಜನ ಯೋಜನೆಯಡಿ 1.25 ಲಕ್ಷ ರೂಪಾಯಿಗಳ ನಗದು ಬಹುಮಾನವನ್ನು ಪಡೆದುಕೊಂಡಿದೆ.
ಈ ಬಹುಮಾನದ ಚೆಕ್ ಅನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎಸ್. ವಿದ್ಯಾಶಂಕರ್ ಅವರು, ಸಂಸ್ಥೆಯ ಪ್ರಾಂಶುಪಾಲರಾದ ಡಾ. ಹೆಚ್.ಸಿ. ನಾಗರಾಜ್ ಮತ್ತು ದೈಹಿಕ ಶಿಕ್ಷಣ ನಿರ್ದೇಶಕಿ ಶ್ರುತಿ ಟಿ.ಆರ್. ಅವರಿಗೆ ಹಸ್ತಾಂತರಿಸಿದರು.
ಈ ವೇಳೆ ವಿಟಿಯು ಕುಲಸಚಿವರಾದ ಪ್ರೊ. ಪ್ರಸದ್ ಬಿ. ರಾಂಪುರೆ, ಹಣಕಾಸು ಅಧಿಕಾರಿ ಡಾ. ಪ್ರಶಾಂತ್ ನಾಯಕ್ ಜಿ, ಹಾಗೂ ವಿಟಿಯು ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಜೇಶ್ ವೈ. ಹೆಚ್ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


