ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ‘ಆಟಿಡೊಂಜಿ ದಿನ’ ಸಂಭ್ರಮಾಚರಣೆ

Upayuktha
0

 



ಮಂಗಳೂರು: ತುಳುನಾಡಿನ ಭಾಷೆ, ಸಂಸ್ಕೃತಿ, ಸಂಪ್ರದಾಯ ಹಾಗೂ ಆಹಾರ ವೈವಿಧ್ಯತೆಯನ್ನು ಪರಿಚಯಿಸುವ ಉದ್ದೇಶದಿಂದ ಶ್ರೀನಿವಾಸ ವಿಶ್ವವಿದ್ಯಾಲಯದ ಪಾಂಡೇಶ್ವರ ಸಿಟಿ ಕ್ಯಾಂಪಸ್ನಲ್ಲಿಆಟಿಡೊಂಜಿ ದಿನತುಳುನಾಡಿನ ಸಂಭ್ರಮಕಾರ್ಯಕ್ರಮವನ್ನು ವಿಜೃಂಭಣೆಯಿಂದ ಜುಲೈ ೨೫ರಂದು  ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. . ಶ್ರೀನಿವಾಸ ರಾವ್ ವಹಿಸಿದ್ದರು.


ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿದ ಡಾ. . ಶ್ರೀನಿವಾಸ ರಾವ್, ತುಳು ಭಾಷೆ ಅತಿ ಮಧುರವಾದ ಭಾಷೆ. ಕೇಳಲು ಚಂದ, ಮಾತನಾಡಲು ಚಂದ. ತುಳು ಭಾಷೆಯ ಮಹತ್ವವನ್ನು ಎಲ್ಲರಿಗೂ ತಿಳಿಸುವ ಉದ್ದೇಶದಿಂದ ಬಾರಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ" ಎಂದು ಹೇಳಿದರು. ಆಚರಣೆಯ ಮೂಲಕ ಆಟಿ ತಿಂಗಳ ಮಹತ್ವ ಹಾಗೂ ಆಟಿ ತಿಂಗಳ ವಿಶೇಷ ತಿನಿಸುಗಳ ಮಹತ್ವವನ್ನು ಜನರಿಗೆ ಪರಿಚಯಿಸಲಾಗುತ್ತಿದೆ ಎಂದರು. ಆಟಿ ತಿಂಗಳ ಸಾಂಸ್ಕೃತಿಕ ಮಹತ್ವ ದೇಶದ ಜನತೆಗೆ ತಿಳಿಯಬೇಕು ಎಂಬುದು ನಮ್ಮ ಆಶಯ ಎಂದು ತಿಳಿಸಿದರು. ಕಳೆದ 12 ವರ್ಷಗಳಿಂದ ಶ್ರೀನಿವಾಸ ವಿಶ್ವವಿದ್ಯಾಲಯವು ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಹುಲಿವೇಷ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಜನರಿಗೆ ಪರಿಚಯಿಸುವ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ಆಟಿಡೊಂಜಿ ದಿನ ಕಾರ್ಯಕ್ರಮವು ಹಿಂದಿನ ಕಾಲದ ಜೀವನ ಪದ್ಧತಿ, ಸಂಸ್ಕೃತಿ ಹಾಗೂ ಸಂಪ್ರದಾಯಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ಉತ್ತಮ ಕಾರ್ಯವಾಗಿದೆ ಎಂದು ಶ್ಲಾಘಿಸಿದರು. ವಿದ್ಯಾರ್ಥಿಗಳಿಗೆ ಕೃಷಿ ಪದ್ಧತಿ ಹಾಗೂ ಬೇಸಾಯದ ಮಹತ್ವವನ್ನು ತಿಳಿಸಬೇಕು. ತುಳು ಭಾಷೆಯೇ ಒಂದು ಸಂಸ್ಕೃತಿ. ಶ್ರೀನಿವಾಸ ವಿಶ್ವವಿದ್ಯಾಲಯದಂತಹ ಶಿಕ್ಷಣ ಸಂಸ್ಥೆಗಳ ಮೂಲಕ ತುಳುನಾಡಿನ ಜ್ಞಾನ, ಪರಂಪರೆ ಮತ್ತು ಸಂಸ್ಕೃತಿಯನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು.


ಕಾರ್ಯಕ್ರಮದ ಅಂಗವಾಗಿ ತುಳುನಾಡಿನ ಪಾರಂಪರಿಕ ಆಹಾರ, ಆಟಿ ತಿಂಗಳ ವಿಶೇಷ ತಿನಿಸುಗಳು, ಪ್ರಾಚೀನ ಗೃಹೋಪಯೋಗಿ ವಸ್ತುಗಳ ಪ್ರದರ್ಶನ, ಸಾಂಸ್ಕೃತಿಕ ಪ್ರದರ್ಶನಗಳು ಹಾಗೂ ಜನಪದ ಪರಂಪರೆಯನ್ನು ಪರಿಚಯಿಸುವ ವಿಶೇಷ ಮಳಿಗೆಗಳನ್ನು ಏರ್ಪಡಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಅತಿಥಿಗಳು ತುಳುನಾಡಿನ ಸಂಸ್ಕೃತಿಯ ಸೊಬಗನ್ನು ಅನುಭವಿಸಿದರು.


ಪ್ರೊ. ಶಿಲ್ಪಾ ಪ್ರಾಸ್ತಾವಿಸಿದರು. ಪ್ರೊ. ಸುಷ್ಮಿತಾ ಎಸ್. ಕೋಟ್ಯಾನ್ ಸ್ವಾಗತಿಸಿದರು. ಡಾ. ಶಕೀಲಾ ವಂದನಾರ್ಪಣೆ ಸಲ್ಲಿಸಿದರು. ಪ್ರೊ. ಪ್ರಜ್ಞಾ ಒಡಿಲ್ನಾಳ ಹಾಗೂ ಪ್ರೊ. ರೇವತಿ ಕಾರ್ಯಕ್ರಮ ನಿರೂಪಿಸಿದರು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top