ಮಂಗಳೂರು: ಸೇಂಟ್ ಅಲೋಶಿಯಸ್ (ಡೀಮ್ಡ್ ಟು ಬಿ) ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಕಾಲೇಜಿನಲ್ಲಿ 2026–30ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿಗಳ ಪ್ರವೇಶ ಕಾರ್ಯಕ್ರಮವನ್ನು ಜುಲೈ 20ರಂದು ಆಯೋಜಿಸಲಾಯಿತು.
ಮಣಿಪಾಲ್ ಮಾಹೆಯ ಹಿರಿಯ ಸಲಹೆಗಾರ ಡಾ. ಟಿ. ಲಾಜರ್ ಮ್ಯಾಥ್ಯೂ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಹೊಸತನ ಮತ್ತು ತಾಂತ್ರಿಕ ಕೌಶಲ್ಯದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ವಿಶ್ವವಿದ್ಯಾಲಯದ ಕುಲಪತಿ ರೆವ. ಡಾ. ಪ್ರವೀಣ್ ಮಾರ್ಟಿಸ್ ಎಸ್‌ಜೆ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯೊಂದಿಗೆ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.
ಬಳಿಕ ನಡೆದ ಪರಿಚಯ ಹಾಗೂ ತಾಂತ್ರಿಕ ಅಧಿವೇಶನಗಳಲ್ಲಿ ಹೊಸ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ಶೈಕ್ಷಣಿಕ ವಾತಾವರಣ ಮತ್ತು ವೃತ್ತಿ ಅವಕಾಶಗಳ ಕುರಿತು ಮಾಹಿತಿ ನೀಡಲಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ



