ಬೆಂಗಳೂರು: ಇಲ್ಲಿನ ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ
ಮಾಹಿತಿ ತಂತ್ರಜ್ಞಾನ ಶಾಲೆ (School of Information Technology) ವತಿಯಿಂದ ಕೃತಕ
ಬುದ್ಧಿಮತ್ತೆ ಹಾಗೂ ಯಂತ್ರ ಕಲಿಕೆ (AI/ML) ಶ್ರೇಷ್ಠತಾ
ಕೇಂದ್ರವನ್ನು ಇತ್ತೀಚೆಗೆ ಉದ್ಘಾಟಿಸಲಾಯಿತು.
ಶೆರ್ಪಾವೆಕ್ಟರ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ
ಸ್ಥಾಪಿಸಲಾದ ಈ ಕೇಂದ್ರವು ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಸಂಶೋಧನೆ, ಕೈಗಾರಿಕಾ
ಯೋಜನೆಗಳು, ಇಂಟರ್ನ್‌ಶಿಪ್ ಹಾಗೂ ನೈಜ
ತಂತ್ರಜ್ಞಾನ ಅನುಭವವನ್ನು ಒದಗಿಸುವ ಉದ್ದೇಶ ಹೊಂದಿದೆ.
ಉದ್ಘಾಟನಾ ಸಮಾರಂಭದಲ್ಲಿ ಮಾಹಿತಿ ತಂತ್ರಜ್ಞಾನ ಶಾಲೆಯ ನಿರ್ದೇಶಕ ರೆ. ಫಾ.
ಡೆನ್ಜಿಲ್ ಲೋಬೋ ಎಸ್.ಜೆ., ಡೀನ್ ಡಾ. ಎ.ಎಂ.
ಬೋಜಮ್ಮ, ಅಡ್ವಾನ್ಸ್ಡ್ ಕಂಪ್ಯೂಟಿಂಗ್ ವಿಭಾಗದ
ಮುಖ್ಯಸ್ಥೆ ಡಾ. ಜಯತಿ ಭದ್ರಾ, ಕಂಪ್ಯೂಟರ್
ಸೈನ್ಸ್ ವಿಭಾಗದ ಮುಖ್ಯಸ್ಥೆ ಡಾ. ಪ್ರಶಾಂತಿ ಬಿ.ಜಿ. ಹಾಗೂ
ಶೆರ್ಪಾವೆಕ್ಟರ್ ಸಂಸ್ಥೆಯ ಸಂಸ್ಥಾಪಕ ಮತ್ತು ಮುಖ್ಯ ತಂತ್ರಜ್ಞಾನ ಅಧಿಕಾರಿ ಡಾ. ಕೆ.ಎಸ್.
ಶ್ರೀನಿವಾಸ್ ಉಪಸ್ಥಿತರಿದ್ದರು.
ಈ ಕೇಂದ್ರದ ಮೂಲಕ ವಿದ್ಯಾರ್ಥಿಗಳು ಉದ್ಯಮ ತಜ್ಞರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಲು, ನೈಜ
ಯೋಜನೆಗಳಲ್ಲಿ ಕಾರ್ಯನಿರ್ವಹಿಸಲು ಹಾಗೂ ಉದ್ಯಮಶೀಲತೆ, ಇನ್ಕ್ಯುಬೇಷನ್
ಮತ್ತು ತಾಂತ್ರಿಕ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಲು ಅವಕಾಶ ದೊರೆಯಲಿದೆ ಎಂದು ಡಾ.
ಬೋಜಮ್ಮ ತಿಳಿಸಿದರು.
ಮುಖ್ಯ ಅತಿಥಿ ಡಾ. ಕೆ.ಎಸ್. ಶ್ರೀನಿವಾಸ್ ಮಾತನಾಡಿ, ಭಾರತದಲ್ಲಿ
ಮಾಹಿತಿ ತಂತ್ರಜ್ಞಾನ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದ್ದು, ಕೌಶಲ್ಯಯುತ
ತಂತ್ರಜ್ಞರ ಬೇಡಿಕೆ ಹೆಚ್ಚುತ್ತಿದೆ. ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆಯ ಮೇಲೆ
ಅವಲಂಬಿತರಾಗುವುದಕ್ಕಿಂತ ಪ್ರೋಗ್ರಾಮಿಂಗ್ ಮತ್ತು ಗಣಿತದ ಮೂಲಭೂತ ಜ್ಞಾನವನ್ನು
ಬಲಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


