ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಇದರ ಮಾನವಿಕ ವಿಭಾಗದ ವತಿಯಿಂದ ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ವಾಸುದೇವ ಎನ್. ಮಾತನಾಡಿ, ಜನಸಂಖ್ಯೆಯ ನಿರಂತರ ಹೆಚ್ಚಳದಿಂದ ವಿಶ್ವ ಎದುರಿಸುತ್ತಿರುವ ಸವಾಲುಗಳು, ಸಂಪನ್ಮೂಲಗಳ ಮೇಲಿನ ಒತ್ತಡ ಹಾಗೂ ಸುಸ್ಥಿರ ಅಭಿವೃದ್ಧಿಯ ಅಗತ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ವಂ. ಡಾ. ಆಂಟನಿ ಪ್ರಕಾಶ್ ಮೊಂತೆರೋ ಮಾತನಾಡಿ ವಿದ್ಯಾರ್ಥಿಗಳು ವಿಶ್ವದ ಜನಸಂಖ್ಯೆಯ ಸ್ಥಿತಿಗತಿಗಳನ್ನು ವಿಶ್ಲೇಷಿಸಿ, ಸರಳ ಜೀವನವನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಕ್ಯಾಪ್ಟನ್ ಜಾನ್ಸನ್ ಡೇವಿಡ್ ಸಿಕ್ವೇರಾ ಉಪಸ್ಥಿತರಿದ್ದರು. ತೃತೀಯ ಬಿ.ಎ. ವಿದ್ಯಾರ್ಥಿನಿ ಫಾತಿಮತ್ ರಿಫಾ ಸ್ವಾಗತಿಸಿ, ತೃತೀಯ ಬಿ.ಎ. ವಿದ್ಯಾರ್ಥಿ ಅವಿನಾಶ್ ವಂದಿಸಿದರು. ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹರ್ಷಿತಾ ಪಿ.ವಿ. ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


