"ಕಲಾಕುಂಚ" ಕುರಿತು ರಾಜ್ಯ ಮಟ್ಟದ ಕವನ ಸ್ಪರ್ಧೆಯ ಫಲಿತಾಂಶ ಪ್ರಕಟ

Upayuktha
0


ದಾವಣಗೆರೆ: ಇಲ್ಲಿನ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ "ಕಲಾಕುಂಚ"ದ ಕುರಿತು ನಡೆದ ರಾಜ್ಯ ಮಟ್ಟದ ಕವನ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ. ತೀರ್ಪುಗಾರರಾಗಿ, ಸಾಹಿತಿಗಳು, ಕವಯತ್ರಿಯಾದ ಡಾ|| ಆರತಿ ಸುಂದರೇಶ್ ಭಾಗವಹಿಸಿದ್ದರು.


ಪ್ರಥಮ ಬಹುಮಾನ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಪ್ರತಿಭಾ ಪ್ರಶಾಂತ್, ದ್ವಿತೀಯ ಬಹುಮಾನ ದಾವಣಗೆರೆಯ ಲತಾ ಕೆ., ತೃತೀಯ ಬಹುಮಾನ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಗೀತಾ ಕೊಂಕೋಡಿ, ಸಮಾಧಾನಕರ ಬಹುಮಾನಗಳು ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಬಿ.ಕೆ.ಸೋದರ, ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಶೋಭಾ ಇರಂದೂರ್ ಬಿಕ್ಕೆತ್ತುರ ಪಡೆದಿದ್ದಾರೆ ಎಂದು ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಪ್ರಕಟಿಸಿದ್ದಾರೆ.  


ಯಾವುದೇ ಸಭೆ-ಸಮಾರಂಭಗಳು ಇಲ್ಲದೇ ಈ ಕವನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಅವರವರ ವ್ಯಾಟ್ಸಪ್ ಸಂಖ್ಯೆಗೆ ಫಲಿತಾಂಶ, ಅಭಿನಂದನಾ ಪತ್ರ ಕಳಿಸಲಾಗುವುದು. 


ವಿಜೇತರಿಗೆ ಕಲಾಕುಂಚದ ಸಂಸ್ಥೆಯ ಸರ್ವ ಸದಸ್ಯರು, ಪದಾಧಿಕಾರಿಗಳು, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ಶುಭ ಹಾರೈಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top