ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಭಾಗ ಹಾಗೂ ಟೆಕ್ಫಿನಿಟಿ ಟೆಕ್ ಕ್ಲಬ್ ವತಿಯಿಂದ ಆಯೋಜಿಸಲಾದ "ಪ್ರಾಜೆಕ್ಟ್‌ವರ್ಸ್2026" ಕಾರ್ಯಕ್ರಮವು ಕಾಲೇಜಿನ ಪ್ರಾಂಶುಪಾಲ ಡಾ| ಆ್ಯಂಟನಿ ಪ್ರಕಾಶ್ ಮೊಂತೇರೊರವರಿಂದ ಉದ್ಘಾಟನೆಗೊಂಡಿತು.
ನಂತರ ಮಾತನಾಡಿದ ಅವರು,
ಆವಿಷ್ಕಾರ ಮತ್ತು ನವೋದ್ಯಮ ಇಂದಿನ ಯುಗದ ಯಶಸ್ಸಿನ ಪ್ರಮುಖ
ಅಡಿಗಲ್ಲುಗಳು. ತಂತ್ರಜ್ಞಾನ
ಪ್ರತಿದಿನ ಹೊಸ ಆಯಾಮಗಳನ್ನು ತೆರೆದಿಡುತ್ತಿರುವ
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳನ್ನು ಕಲಿಯುವ
ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಕೃತಕ ಬುದ್ಧಿಮತ್ತೆ, ಡಿಜಿಟಲ್ ತಂತ್ರಜ್ಞಾನ ಹಾಗೂ ಸಾಫ್ಟ್ವೇರ್
ಅಭಿವೃದ್ಧಿಯಲ್ಲಿ ಜಗತ್ತು ವೇಗವಾಗಿ ಮುನ್ನಡೆಯುತ್ತಿದೆ. ಈ ಬದಲಾವಣೆಗಳಿಗೆ ಹೊಂದಿಕೊಳ್ಳುವುದು
ಮಾತ್ರವಲ್ಲ, ಹೊಸತನವನ್ನು ಸೃಷ್ಟಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು. ತಂತ್ರಜ್ಞಾನ ಎಷ್ಟೇ ಮುಂದುವರಿದರೂ ನಮ್ಮ ಬೇರುಗಳನ್ನು, ಸಂಸ್ಕೃತಿಯನ್ನು,
ಮತ್ತು ಮಾನವೀಯ ಮೌಲ್ಯಗಳನ್ನು ಎಂದಿಗೂ ಮರೆಯಬಾರದು. ಜ್ಞಾನವು ಕೌಶಲ್ಯವನ್ನು ನೀಡುತ್ತದೆ; ಆದರೆ ಮೌಲ್ಯಗಳು ವ್ಯಕ್ತಿತ್ವವನ್ನು
ರೂಪಿಸುತ್ತವೆ. ಉತ್ತಮ ತಂತ್ರಜ್ಞಾನ ತಜ್ಞರಾಗುವುದರ ಜೊತೆಗೆ ಉತ್ತಮ ಮನುಷ್ಯರಾಗುವುದೂ ಅಷ್ಟೇ ಮುಖ್ಯ ಎಂದು ಹೇಳಿದರು.
ದ್ವಿತೀಯ ಎಂಸಿಎ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ವಿವಿಧ ಸಾಫ್ಟ್ವೇರ್ ಯೋಜನೆಗಳು, ವೆಬ್ ಹಾಗೂ ಮೊಬೈಲ್ ಅಪ್ಲಿಕೇಶನ್ಗಳು ಮತ್ತು ನವೀನ ತಾಂತ್ರಿಕ ಪರಿಹಾರಗಳನ್ನು ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಪ್ರದರ್ಶಿಸಲಾಯಿತು. ಪ್ರಥಮ ಎಂಸಿಎ ಹಾಗೂ ಅಂತಿಮ ವರ್ಷದ ಬಿಸಿಎ ಮತ್ತು ಬಿಸಿಎ(ಎಐ & ಎಂಎಲ್), ಪ್ರಥಮ ಹಾಗೂ ದ್ವಿತೀಯ ವರ್ಷದ ಬಿಎಸ್ಸಿ ಡೇಟಾ ಸಯನ್ಸ್ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಪ್ರಥಮ ಎಂಸಿಎ ವಿದ್ಯಾರ್ಥಿನಿ ರಕ್ಷಿತಾ ಕೆ ಆರ್ ಮತ್ತು ಬಳಗ ಪ್ರಾರ್ಥಿಸಿ, ಸ್ನಾತಕೋತ್ತರ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಭಾಗದ ಡೀನ್ ಡಾ| ವಿನಯಚಂದ್ರ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಟೆಕ್ಫಿನಿಟಿ ಟೆಕ್ ಕ್ಲಬ್ನ ನಿರ್ದೇಶಕಿ ಅಕ್ಷತಾ ಬಿ. ವಂದಿಸಿದರು. ಸ್ನಾತಕೋತ್ತರ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ನೀಲಂ ಕುಟ್ಟಪ್ಪ ಕಾರ್ಯಕ್ರಮ ನಿರ್ವಹಿಸಿದರು. ಸ್ನಾತಕೋತ್ತರ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಶೋಧನ್ ಪಿ ಜಿ ಹಾಗೂ ಪ್ರಥಮ ಎಂಸಿಎ ವಿದ್ಯಾರ್ಥಿ ವೇಣುಗೋಪಾಲ್ ಸಹಕಾರ ನೀಡಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


