ವಿದ್ಯಾರ್ಥಿಗಳು ಎಳವೆಯಲ್ಲೇ ಕಲಾ ಹವ್ಯಾಸಗಳನ್ನು ಬೆಳೆಸಿಕೊಳ್ಳಲಿ: ವಾದಿರಾಜ ಉಪ್ಪೂರು

Upayuktha
0



ಸುರತ್ಕಲ್: ವಿದ್ಯಾರ್ಥಿಗಳು ಎಳವೆಯಲ್ಲೇ ಕಲಾ ಹವ್ಯಾಸಗಳನ್ನು ಬೆಳೆಸಿಕೊಳ್ಳುವುದು ಅಗತ್ಯ. ಚಲನಚಿತ್ರವು ಅತ್ಯಂತ ಪ್ರಭಾವಶಾಲಿ ಕಲಾ ಮಾಧ್ಯಮವಾಗಿದ್ದು, ಅದು ಮಕ್ಕಳ ಮನಸ್ಸಿನ ಮೇಲೆ ವಿಶೇಷ ಪರಿಣಾಮ ಬೀರುತ್ತದೆ. ಹೀಗಾಗಿ ಮಕ್ಕಳು ಉತ್ತಮ ಚಲನಚಿತ್ರಗಳು ಸಾರುವ ಸತ್ಸಂದೇಶಗಳನ್ನು ಗ್ರಹಿಸಿ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪ್ರಸಿದ್ಧ ಚಲನಚಿತ್ರ ನಿರ್ದೇಶಕ ವಾದಿರಾಜ ಉಪ್ಪೂರು ಹೇಳಿದರು.


ಅವರು ಚಿತ್ರಾಪುರ ಕುಳಾಯಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (ಫಿಶರೀಸ್)ಯಲ್ಲಿ ಹಮ್ಮಿಕೊಳ್ಳಲಾಗಿದ್ದ ಹಳೆ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಕಲಾ ಹವ್ಯಾಸಗಳ ಕುರಿತು ಮಾತನಾಡುತ್ತಿದ್ದರು. ಇದೇ ವೇಳೆ ಅವರು ಕಲಾ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಕುರಿತು ವಿದ್ಯಾರ್ಥಿಗಳೊಂದಿಗೆ ಆಪ್ತವಾಗಿ ಸಂವಾದ ನಡೆಸಿದರು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಸೂಕ್ತ ಪ್ರೋತ್ಸಾಹ ನೀಡುವ ಕೆಲಸವನ್ನು ಸಂಘದ ವತಿಯಿಂದ ನಿರಂತರವಾಗಿ ಮಾಡಲಾಗುತ್ತಿದೆ ಎಂದರು.


ಶಾಲಾಭಿವೃದ್ಧಿ ಸಮಿತಿ (SDMC) ಅಧ್ಯಕ್ಷೆ ಶಶಿಕಲಾ ಹಾಗೂ ಶಾಲೆಯ ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶೋಭಾ ಗಣ್ಯರನ್ನು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top