ನಂತೂರು: ಆಧುನಿಕ ಕಾಲಘಟ್ಟದಲ್ಲಿ ಪಠ್ಯಗಳ ಜೊತೆಗೆ ಉಪಯುಕ್ತ ಪಾಠೇತರ ವಿಚಾರಗಳು ಕೂಡ ವಿದ್ಯಾರ್ಥಿಗಳಿಗೆ ಪೂರಕ ಶಿಕ್ಷಣವಾಗಿ ಪರಿಣಮಿಸುವುದು ಎಂದು ತೋನ್ಸೆ ಪುಷ್ಕಳ ಕುಮಾರ್ ಹೇಳಿದರು.
ಅವರು ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ ಚಿನಕುರಳಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.
ಸೇವಾ ಸಮಿತಿ ಕಾರ್ಯದರ್ಶಿ ಶ್ರೀಕೃಷ್ಣ ನೀರಮೂಲೆ, ಪ್ರಾಂಶುಪಾಲ ಸಂದೀಪ್ ಆಚಾರ್ಯ, ಪ್ರಾಧ್ಯಾಪಕ ಜ್ಯೋತಿಷ್ ಕುಮಾರ್ ಉಪಸ್ಥಿತರಿದ್ದರು.
ಗಾಯಕ ತೋನ್ಸೆಯವರು ದೇಶಭಕ್ತಿ ಗೀತೆ, ಜನಪದ, ಭಾವಗೀತೆಗಳ, ಪ್ರಾತ್ಯಕ್ಷಿಕೆಯೊಂದಿಗೆ ಹಾಡಿ, ಮಿಮಿಕ್ರಿ ಹಾಸ್ಯಗಳ ಮೂಲಕ ವಿದ್ಯಾರ್ಥಿಗಳ ಮನರಂಜಿಸಿದರು. ಸತೀಶ್ ಸುರತ್ಕಲ್ ಹಾಗೂ ದೀಪಕ್ ರಾಜ್ ಉಳ್ಳಾಲ್ ಹಿನ್ನೆಲೆಯಲ್ಲಿ ಸಹಕರಿಸಿದರು. ವಿದ್ಯಾರ್ಥಿಗಳಾದ ಆಯುಷ್ ಹಾಗೂ ಜಾನ್ವಿ ಹಾಡಿದರು. ಸಾನ್ವಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಗ್ರೀಷ್ಮಾ ಸ್ವಾಗತಿಸಿ, ಪ್ರತೀಕ್ಷಾ ವಂದಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ
