ತೆಂಕನಿಡಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್( ರಿ ) ಉಡುಪಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಜಂಟಿ ಆಶ್ರಯದಲ್ಲಿ ಇಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಉದಯಕುಮಾರ್ ಶೆಟ್ಟಿ, ಅಧ್ಯಕ್ಷರು ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆ ಮಲ್ಪೆ ವಲಯ ಇವರು ನೆರವೇರಿಸಿದರು.
ನಂತರ ಮಾತನಾಡಿ ಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸುವಂತಹ ಹಲವಾರು ಕಾರ್ಯಕ್ರಮಗಳನ್ನು ಜನಜಾಗೃತಿ ವೇದಿಕೆಯು ನಡೆಸುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿ ಕಾರ್ಯಕ್ರಮ ಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ನಿತ್ಯಾನಂದ ಗಾoವಕರ್ ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ವಿರೋಧಿ ಮತ್ತು ಸ್ವಾಸ್ಯ ಸಂಕಲ್ಪದ ಪ್ರತಿಜ್ಞಾವಿಧಿ ಬೋಧಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕೀರ್ತಿ ಎಸ್ ಮಾತನಾಡುತ್ತಾ ಹೊಸ ತಲೆಮಾರಿನ ಯುವಕ ಯುವತಿಯರು ಹೆಚ್ಚಾಗಿ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದು, ಸಮಾಜದಿಂದ ವಿಮುಖವಾಗಿ ಸಾಗುತ್ತಿರುವುದು ಆತಂಕಕಾರಿ. ತಮ್ಮ ಆರೋಗ್ಯವನ್ನು ಕೆಟೆಸಿಕೊಳ್ಳುವುದರ ಜೊತೆಗೆ ತಮ್ಮ ವೃತ್ತಿ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಇಲ್ಲದೆ ಸಾಮಾಜಿಕ ಅಪರಾಧಗಳಲ್ಲಿಯೂ ಭಾಗಿಯಾಗಿ ವ್ಯವಸ್ಥೆಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದಾರೆ . ಆದ್ದರಿಂದ ವಿದ್ಯಾಸಂಸ್ಥೆಗಳು ಸರಕಾರ ವಿವಿಧ ಇಲಾಖೆಗಳು, ಸ್ವಯಂ ಸೇವಾ ಸಂಸ್ಥೆಗಳು, ಹಾಗೂ ಸಾರ್ವಜನಿಕರು, ಜೊತೆಯಾಗಿ ಶ್ರಮಿಸಿ, ಯುವ ಜನತೆಯನ್ನು, ಮಾದಕ ವ್ಯಸನದಿಂದ ಮುಕ್ತರಾಗುವಲ್ಲಿ ಪ್ರಯತ್ನಿಸಬೇಕಾಗಿದೆ. ಯಾವ ರೀತಿ ಯುವ ಜನತೆ ಎಚ್ಚೆತ್ತುಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಹೊರಹೊಮ್ಮಬಹುದು ಎಂಬ ಬಗ್ಗೆ ಉದಾಹರಣೆಗಳ ಮೂಲಕ ವಿವರಿಸಿದರು. ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಡ್ರಗ್ ಮಾದಕ ವಸ್ತುಗಳ ಸೇವನೆಯಿಂದ ಅಪರಾಧಗಳು ನಡೆಯುತ್ತಿದ್ದು, ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿ ಜೀವನದಲ್ಲಿ, ದೃಢ ನಿರ್ಧಾರ, ಉತ್ತಮ ಚಿಂತನೆಗಳ ಮೂಲಕ ಸುಧಾರಣೆ ಸಾಧ್ಯವಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಕೃಷ್ಣ, ಒಕ್ಕೂಟದ ವಲಯ ಅಧ್ಯಕ್ಷ, ಮಲ್ಪೆ ವಲಯ ಇವರು ಉಪಸ್ಥಿತರಿದ್ದರು. ಶ್ರೀ ಡಾ. ರೋಷನ್ ಕುಮಾರ್ ಶೆಟ್ಟಿ, ನೋಡಲ್ ಅಧಿಕಾರಿಗಳು ಮಾದಕ ದ್ರವ್ಯ ತಡೆ ಘಟಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತೆಂಕನಿಡಿಯೂರು ಕಾರ್ಯಕ್ರಮನಿರ್ವಹಿಸಿದರು. ತಾಲೂಕಿನ ಜ್ಯಾನವಿಕಾಸ ಸಮನ್ವಯಾಧಿಕಾರಿ ಪೂರ್ಣಿಮಾ ವಂದಿಸಿದರು. ಕೆಳಾರ್ಕಲ್ ಬೆಟ್ಟು ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಉಮಾ ಹಾಗೂ ವಿದ್ಯಾರ್ಥಿಗಳು, ಅಧ್ಯಾಪಕರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


