ಸುರತ್ಕಲ್: ಭವ್ಯ ಭಾರತದ ಇತಿಹಾಸ ಮತ್ತು ಸಂಸ್ಕೃತಿಯನ್ನು ಉಳಿಸುವ ಶ್ರೇಷ್ಠ ರಾಯಭಾರಿಗಳು ನಮ್ಮ ಯುವ ಜನಾಂಗ ಆಗಬೇಕು ಎಂದು ಇಂಡಿಯನ್ ಓವರ್‌ಸೀಸ್ ಬ್ಯಾಂಕಿನ ನಿವೃತ್ತ ಮಹಾ ಪ್ರಬಂಧಕ ಕುಮಾರ್ ಬಿ.ಕೆ ನುಡಿದರು.
ಅವರು ಹಿಂದೂ ವಿದ್ಯಾದಾಯಿನಿ ಸಂಘಕ್ಕೆ ಒಳಪಟ್ಟ ವಿದ್ಯಾದಾಯಿನಿ ಹೈಸ್ಕೂಲು ಮತ್ತು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ ಜಂಟಿಯಾಗಿ ಆಯೋಜಿಸಿದ "ಭಾರತದ ಸಂತ ಪರಂಪರೆ" ಎಂಬ ಉಪನ್ಯಾಸ ಸರಣಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಭಾರತ ಸಾಂಸ್ಕೃತಿಕವಾಗಿ ಪ್ರಪಂಚದ ಉಳಿದೆಲ್ಲ ರಾಷ್ಟ್ರಗಳಿಗಿಂತ ವಿಭಿನ್ನವಾದ ಮತ್ತು ಶ್ರೇಷ್ಠವಾದ ದೇಶ. ಈ ದೇಶದ ಇತಿಹಾಸದ ಬಗೆಗಿನ ಅರಿವಿನೊಂದಿಗೆ, ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವಜನರಾದ ನೀವೆಲ್ಲ ತೊಡಗಿಸಿಕೊಳ್ಳಬೇಕು ಎಂದು ನುಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಗೋವಿಂದ ದಾಸ ಕಾಲೇಜಿನ ಪ್ರಾಚಾರ್ಯರಾದ ಪ್ರೊಫೆಸರ್ ಹರೀಶ ಆಚಾರ್ಯ ಮಾತನಾಡಿ, ಬದಲಾವಣೆ ಜಗದ ನಿಯಮ, ಎಲ್ಲ ಬದಲಾವಣೆಗಳನ್ನು ಸ್ವೀಕರಿಸುತ್ತಾ ಭಾರತದ ಶ್ರೇಷ್ಠ ಪರಂಪರೆಗೆ ಕೊಡುಗೆಯನ್ನು ನೀಡಿದ ಎಲ್ಲ ಮಹನೀಯರ ಬಗ್ಗೆ ಅರಿವನ್ನು ಬೆಳೆಸಿಕೊಳ್ಳುತ್ತಾ, ಅವರು ಸಾರಿರುವ ತತ್ವಗಳನ್ನು ನಮ್ಮ ಜೀವನದಲ್ಲಿ ನಾವು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಕೆ ಆರ್ ಎಂ ಎಸ್ ಎಸ್ ನ ಅಧ್ಯಕ್ಷರಾದ ಡಾ. ಸುಧಾ ಶೆಟ್ಟಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ವಿದ್ಯಾದಾಯಿನಿ ಹೈಸ್ಕೂಲಿನ ಸಹಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮಿ ಕೆ ವoದಿಸಿದರು. ವಿದ್ಯಾರ್ಥಿನಿ ಲಕ್ಷ್ಮಿ ಗಂಗಾ ಕಾರ್ಯಕ್ರಮವನ್ನು ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

