ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಂಗಳೂರಿನ ಶಾರದಾ ಪದವಿಪೂರ್ವ ಕಾಲೇಜಿನ ಕನ್ನಡ ಸಂಘದ ಸಂಯುಕ್ತ ಆಶ್ರಯದಲ್ಲಿ ಜುಲೈ 4ರ ಶನಿವಾರದಂದು ‘ದತ್ತಿ ಉಪನ್ಯಾಸ ಕಾರ್ಯಕ್ರಮ’ವನ್ನು ಆಯೋಜಿಸಲಾಗಿದೆ. ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ಸಂಜೆ 4.00 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ. ಸಾಹಿತಿ ಭಾ. ಭ. ಮಜಿಬೈಲು ಅವರ ಹೆಸರಿನ ಈ ದತ್ತಿಯನ್ನು ಶ್ರೀಮತಿ ಸವಿತಾ ಭಾಸ್ಕರ್ ಭಂಡಾರಿ ಮತ್ತು ಮಕ್ಕಳು ಪ್ರಾಯೋಜಿಸಿದ್ದಾರೆ.
ಮಂಗಳೂರಿನ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ.ಬಿ. ಪುರಾಣಿಕ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಯಕ್ಷಗಾನ, ಜಾನಪದ ಮತ್ತು ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಭಾಸ್ಕರ ರೈ ಕುಕ್ಕುವಳ್ಳಿ ಅವರು ಈ ಸಂದರ್ಭದಲ್ಲಿ ವಿಶೇಷ ದತ್ತಿ ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ ಅವರು ಆಗಮಿಸಲಿದ್ದಾರೆ. ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಂಜುನಾಥ್ ಎಸ್. ರೇವಣಕರ್ ಹಾಗೂ ಶಾರದಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ನಾಯ್ಕ್ ಅವರು ಉಪಸ್ಥಿತರಿರಲಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


