ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠದ ವತಿಯಿಂದ ಶ್ರೀ ಗೋಕರ್ಣನಾಥೇಶ್ವರ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ, ಗಾಂಧಿನಗರ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ತುಳು ಚಳುವಳಿ - ಆನಿರ್ದ್ ಇನಿಕ್ ಎಂಬ ಕಾರ್ಯಕ್ರಮ ನಾಳೆ ಮಧ್ಯಾಹ್ನ 2:30 ಗಂಟೆಗೆ ನಗರದ ಗಾಂಧಿನಗರ ಶ್ರೀ ಗೋಕರ್ಣನಾಥೇಶ್ವರ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಶ್ರೀ ಗೋಕರ್ಣನಾಥೇಶ್ವರ ಎಜ್ಯುಕೇಷನಲ್ ಇನ್ಸ್ಟಿಟ್ಯೂಷನ್ ಸಂಚಾಲಕ ವಸಂತ ಕಾರಂದೂರ್ ಉದ್ಘಾಟಿಸಲಿದ್ದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠದ ಸಂಯೋಜಕ ಡಾ.ಧನಂಜಯ ಕುಂಬ್ಳೆ ಅಧ್ಯಕ್ಷತೆ ವಹಿಸಲಿದ್ದಾರೆ.


