ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಇದರ ರೋವರ್ಸ್ ಮತ್ತು ರೇಂಜರ್ಸ್ಗಳಿಗೆ ಆಯೋಜಿಸಲಾದ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಒಟ್ಟು ಹದಿನೇಳು ಜನ ಉತ್ತೀರ್ಣರಾಗಿದ್ದು ಬಿಎಸ್ಸಿ ವಿಭಾಗದ ಪ್ರತೀಕ್ಷಾ ಎಂ.ಬಿ ಹಾಗೂ ಕಲಾ ವಿಭಾಗದ ರಶ್ಮಿತಾ ಕೆ ಇವರು ಬೆಂಗಳೂರಿನ ರಾಜಭವನದಲ್ಲಿ ಜುಲೈ 10 ರಂದು ನಡೆಯಲಿರುವ ರ‍್ಯಾಲಿಗೆ ಆಯ್ಕೆಗೊಂಡಿದ್ದು ರಾಜ್ಯಪುರಸ್ಕಾರವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಇವರಿಂದ ಸ್ವೀಕರಿಸಲಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿ ವೃಂದ ಶುಭಹಾರೈಸಿದ್ದಾರೆ. ಇವರಿಗೆ ಕಾಲೇಜಿನ ರೇಂಜರ್ ಲೀಡರ್ ಗಳಾದ ಪ್ರಾಣಿಶಾಸ್ತ್ರ ವಿಭಾಗದ ಉಪನ್ಯಾಸಕಿ ದಿವ್ಯಾಶ್ರೀ ಹಾಗೂ ಬಿಬಿಎ ವಿಭಾಗದ ಉಪನ್ಯಾಸಕಿ ದೀಪಿಕಾ ಇವರು ತರಬೇತಿಯನ್ನು ನೀಡಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


