ಉಡುಪಿ: ಮನೆ ಗ್ರಂಥಾಲಯ 200ನೇ ಅಭಿಯಾನ

Upayuktha
0


ಉಡುಪಿ: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ಮನೆ ಗ್ರಂಥಾಲಯ 200ನೇ ಅಭಿಯಾನ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆಯಿತು.


ಗ್ರಂಥಾಲಯವನ್ನು ಉದ್ಘಾಟಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ, ಮೊಬೈಲ್ ಸಂಸ್ಕೃತಿಯಿಂದ ಪುಸ್ತಕ ಓದುವ ಆಸಕ್ತಿ ಕಡಿಮೆ ಆಗುತ್ತಿರುವ ಈ ಸಮಯದಲ್ಲಿ ಈ ರೀತಿಯ ಗ್ರಂಥಾಲಯದಿಂದ ಪುಸ್ತಕ ಓದುವ ಆಸಕ್ತಿಯನ್ನು ಬೆಳೆಸಬಹುದಾಗಿದೆ. ಪುಸ್ತಕಗಳು ನಮ್ಮ ನಿಜವಾದ ಸ್ನೇಹಿತರು. ತಲೆತಗ್ಗಿಸಿ ಪುಸ್ತಕ ಓದುವುದರಿಂದ ತಲೆಯೆತ್ತಿ ಸಮಾಜದಲ್ಲಿ ಬದುಕಬಹುದು ಇದು ಪುಸ್ತಕದಿಂದ ಮಾತ್ರ ಸಾಧ್ಯ ಎಂದರು.


ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ತನ್ನ ಅತ್ಯುತ್ತಮ ಕಾರ್ಯಗಳಿಂದ ಎಲ್ಲರ ಮನೆ ಮಾತಾಗಿದೆ ಎಂದು ಶುಭ ಹಾರೈಸಿದರು.


ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಗಾಂಧಿ ಆಸ್ಪತ್ರೆಯ ಮುಖ್ಯಸ್ಥ ಡಾ. ಹರೀಶ್ಚಂದ್ರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಾರುತಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ ಶೆಣೈ, ಸುಹಾಸಂ ಅಧ್ಯಕ್ಷೆ ಸಂಧ್ಯಾ ಶೆಣೈ, ಕಾರ್ಯದರ್ಶಿ ಮುರಳೀಧರ್, ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿಗಳಾದ ಜನಾದ೯ನ್‌ ಕೊಡವೂರು, ರಂಜನಿ ವಸಂತ್, ಪದಾಧಿಕಾರಿಗಳಾದ ಆರ್ ವಸಂತ್, ದೀಪಾ ಚಂದ್ರಕಾಂತ್, ಸಿದ್ದಬಸಯ್ಯಸ್ವಾಮಿ ಚಿಕ್ಕಮಠ, ಚಂದ್ರಕಾಂತ್ ಮುಂತಾದವರು ಉಪಸ್ಥಿತರಿದ್ದರು. ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ ಪ್ರಸ್ತಾವನೆಗೈದರು. ಅಭಿಯಾನದ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top