ಉಡುಪಿ: ಪರ್ಯಾಯ ಶ್ರೀ ಶೀರೂರು ಶ್ರೀಕೃಷ್ಣ ಮಠ, ಸುವರ್ಣ ಎಂಟರ್ ಪ್ರೈಸಸ್ ಬ್ರಹ್ಮಾವರ, ಅನ್ನಪೂರ್ಣ ನರ್ಸರಿ ಪೇತ್ರಿ ಮತ್ತು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ ಪಂಚ ಪವಿತ್ರ ಗಿಡ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಜುಲೈ 5 ಆದಿತ್ಯವಾರ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರ್ಯಾಯಶ್ರೀ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಈ ಅಭಿಯಾನಕ್ಕೆ ಚಾಲನೆ ನೀಡಿ, ಈ ರೀತಿಯ ಪರಿಸರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದು ಆಶೀರ್ವಚನ ನೀಡಿದರು.
ಜಯಂಟ್ಸ್ ಗ್ರೂಪ್ ಮಾಜಿ ಫೆಡರೇಷನ್ ಅಧ್ಯಕ್ಷ, ಕಾರ್ಯಕ್ರಮದ ಸಂಘಟಕ ಮಧುಸೂದನ್ ಹೇರೂರು ಈ ಪಂಚ ಪವಿತ್ರ ಗಿಡಗಳನ್ನು ದೇವಸ್ಥಾನಗಳು, ದೈವಸ್ಥಾನ,ಗರಡಿಗಳು ಮತ್ತು ನಾಗಬನಗಳಲ್ಲಿ ನೀಡುವ ಕಾರ್ಯಕ್ರಮ ಇದಾಗಿದ್ದು ಈ ಮೂಲಕ ಪರಿಸರಕ್ಕೆ ನಾವೆಲ್ಲರೂ ಕೊಡುಗೆ ನೀಡಬೇಕಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬ್ರಹ್ಮಾವರ ಮಾದಲಿಂಗೇಶ್ವರ ದೇವಸ್ಥಾನ ಜೀರ್ಣೊದ್ದಾರ ಸಮಿತಿ ಅಧ್ಯಕ್ಷ ಗೋವಿಂದರಾಜ್ ಹೆಗ್ಡೆ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಕಮಲಾಕ್ಷ ಹೆಬ್ಬಾರ್, ಅನ್ನಪೂರ್ಣ ನರ್ಸರಿಯ ಪ್ರಸಾದ್ ಭಟ್,ಜಯಂಟ್ಸ್ ಗ್ರೂಪ್ ಯೂನಿಟ್ ಡೈರೆಕ್ಟರ್ ಸುಂದರ್ ಪೂಜಾರಿ ಮೂಡು ಕುಕುಡೆ, ಅಧ್ಯಕ್ಷ ಅಣ್ಣಯ್ಯ ದಾಸ್, ಶ್ರೀನಾಥ್ ಕೋಟ, ವಿವೇಕಾನಂದ ಕಾಮತ್, ರತ್ನ ಶ್ರೀನಾಥ್, ಮಾಜಿ ಫೆಡರೇಶನ್ ಅಧ್ಯಕ್ಷ ತೇಜೇಶ್ವರ್ ರಾವ್ ಮುಂತಾದವರು ಉಪಸ್ಥಿತರಿದ್ದರು. ರಾಘವೇಂದ್ರ ಪ್ರಭು,ಕವಾ೯ಲು ನಿರೂಪಿಸಿದರು.
ಕ್ಲಾಸಿಕ್ ನರ್ಸರಿ ಪೇತ್ರಿ ಸಹಕರಿಸಿದರು. ಸುಮಾರು 500 ದೇವ ವೃಕ್ಷಗಳನ್ನು ವಿತರಿಸಲಾಯಿತು. ಕಿಷ್ಕರ, ಮಂದಾರ ಸೂರಿಗೆ, ನಾಗಸಂಪಿಗೆ, ರೇಂಜ, ಬಿಲ್ಪ ಪತ್ರೆ, ಮಾದ್ರಪಲ, ಮಲ್ಲಿಗೆ ಸೀತಾ, ಆಶೋಕ ಮತ್ತಿತರ ವಿಶೇಷ ಸ್ವಂದನೆ ನೀಡುವ ಗಿಡಗಳನ್ನು ಸುಮಾರು 70 ಆರಾಧನ ಕೇಂದ್ರಗಳಿಗೆ ನೀಡಲಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

