ಬಳ್ಳಾರಿ: ವಿಧಾನಪರಿಷತ್ ಮಾಜಿ ಸಭಾಪತಿಗಳು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರಾದ ವಿ.ಆರ್. ಸುದರ್ಶನ್‌ರವರು ಎಸ್ ಐ ಆರ್ ಕಾರ್ಯಕ್ರಮದ ಪ್ರಯುಕ್ತ ಬಳ್ಳಾರಿಗೆ ಆಗಮಿಸಿ, ಬಳ್ಳಾರಿಯ ಅಧಿದೇವತೆ ಶ್ರೀ ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರು ಹಾಗೂ ಶ್ರೀ ಕನಕದುರ್ಗಮ್ಮ ದೇವಿ ದೇವಸ್ಥಾನದ ಪ್ರಧಾನ ಅರ್ಚಕರೂ ಆದ ಪಿ.ಗಾದೆಪ್ಪ, ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಬೋಯಪಾಟಿ ವಿಷ್ಣುವರ್ಧನ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಸೋಮಪ್ಪ, ಮತ್ತಿತರರು ಇದ್ದರು.


