ಬದಿಯಡ್ಕ: ಶ್ರೀ ಭಾರತೀ ವಿದ್ಯಾಪೀಠ ಮುಜುಂಗಾವಿನಲ್ಲಿ 2026- 27 ನೇ ಶೈಕ್ಷಣಿಕ ವರ್ಷದ ಪ್ರತಿಭಾ ಭಾರತಿ ಮತ್ತು ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ 16 ಗುರುವಾರದಂದು ಜರಗಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ, ಬದಿಯಡ್ಕ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಸಮಾಜ ಸೇವಕರೂ ಆದ ಕೆ. ಎನ್.ಕೃಷ್ಣ ಭಟ್ ಕಿಳಿಂಗಾರು, ಮಾತನಾಡುತ್ತಾ ಆದರ್ಶ ಜೀವನಕ್ಕೆ ಮೌಲ್ಯಯುತ ಶಿಕ್ಷಣದ ಅಗತ್ಯ ಇಂದಿನ ಜನಾಂಗಕ್ಕಿದೆ ಎಂದರಲ್ಲದೇ ನಮ್ಮ ವಿದ್ಯಾಲಯವು ಈ ವಿಷಯದಲ್ಲಿ ಮುಂಚೂಣಿಯಲ್ಲಿದೆ ಎಂದು ಸಂತಸಪಟ್ಟರು.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಹತ್ತನೇ ತರಗತಿಯ ಶಾಶ್ವತ್.ಕೆ ವಹಿಸಿದ್ದರು. ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಬೆಜಪ್ಪೆ , ಆಡಳಿತ ಸೇವಾಸಮಿತಿಯ ಕಾರ್ಯದರ್ಶಿ ಎಚ್.ಎಸ್ ಪ್ರಸಾದ್, ಜತೆ ಕಾರ್ಯದರ್ಶಿ ಬಾಲಕೃಷ್ಣ ಶರ್ಮ ಅನಂತಪುರ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ್ ಭಟ್ ದರ್ಬೆಮಾರ್ಗ ಹಾಗೂ ಸಹ ಮುಖ್ಯ ಶಿಕ್ಷಕಿ ಚಿತ್ರಾಸರಸ್ವತಿ ವೇದಿಕೆಯಲ್ಲಿಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಸಂದರ್ಭದಲ್ಲಿ ನಡೆಯಿತು.
ಒಂಬತ್ತನೆ ತರಗತಿಯ ಕಿಶೋರ ಕೃಷ್ಣ ಸ್ವಾಗತಿಸಿ, ಕು| ಪ್ರೇರಣಾ ವಂದಿಸಿದಳು. ವಿದ್ಯಾರ್ಥಿಗಳಾದ ಭವಿಷ್ ಹಾಗೂ ರೋಹನ್ ಕಾರ್ಯಕ್ರಮವನ್ನು ನಿರೂಪಿಸಿದರು. ಅಧ್ಯಾಪಕರಾದ ಹರಿಪ್ರಸಾದ್ ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ, ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿದರು. ಅಧ್ಯಾಪಕ ವೃಂದ ಕಾರ್ಯಕ್ರಮದ ನೇತೃತ್ವವನ್ನು ವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


