ಆದರ್ಶ ಜೀವನಕ್ಕೆ ಮೌಲ್ಯಯುತ ಶಿಕ್ಷಣ ಅಗತ್ಯ: ಕೆ.ಎನ್. ಕೃಷ್ಣ ಭಟ್

Upayuktha
0

 



ಮುಜುಂಗಾವು: ಇಂದಿನ ಯುವ ಪೀಳಿಗೆಗೆ ಆದರ್ಶ ಜೀವನವನ್ನು ರೂಪಿಸಿಕೊಳ್ಳಲು ಮೌಲ್ಯಯುತ ಶಿಕ್ಷಣದ ಅಗತ್ಯತೆ ತುಂಬಾ ಇದೆ ಎಂದು ಬದಿಯಡ್ಕ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಸಮಾಜ ಸೇವಕ ಕೆ. ಎನ್. ಕೃಷ್ಣ ಭಟ್ ಕಿಳಿಂಗಾರು ಅಭಿಪ್ರಾಯಪಟ್ಟಿದ್ದಾರೆ.


ಅವರು ಇಲ್ಲಿನ ಶ್ರೀ ಭಾರತೀ ವಿದ್ಯಾಪೀಠ ಮುಜುಂಗಾವಿನಲ್ಲಿ ಜುಲೈ 16 ರಂದು ಜರಗಿದ 2026-27ನೇ ಶೈಕ್ಷಣಿಕ ವರ್ಷದ 'ಪ್ರತಿಭಾ ಭಾರತಿ' ಮತ್ತು ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು. ನಮ್ಮ ವಿದ್ಯಾಲಯವು ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ ಎಂದು ಅವರು ಈ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹತ್ತನೇ ತರಗತಿಯ ವಿದ್ಯಾರ್ಥಿ ಶಾಶ್ವತ್ ಕೆ. ವಹಿಸಿದ್ದರು. ಉದ್ಘಾಟನಾ ಸಮಾರಂಭದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ಜರುಗಿದವು.


ವೇದಿಕೆಯಲ್ಲಿ ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಬೆಜಪ್ಪೆ, ಆಡಳಿತ ಸೇವಾಸಮಿತಿಯ ಕಾರ್ಯದರ್ಶಿ ಎಚ್.ಎಸ್. ಪ್ರಸಾದ್, ಜಂಟಿ ಕಾರ್ಯದರ್ಶಿ ಬಾಲಕೃಷ್ಣ ಶರ್ಮ ಅನಂತಪುರ, ಶಾಲಾ ಮುಖ್ಯೋಪಾಧ್ಯಾಯರಾದ ಶ್ಯಾಮ್ ಭಟ್ ದರ್ಬೆಮಾರ್ಗ ಹಾಗೂ ಸಹ ಮುಖ್ಯ ಶಿಕ್ಷಕಿ ಶ್ರೀಮತಿ ಚಿತ್ರಾಸರಸ್ವತಿ ಉಪಸ್ಥಿತರಿದ್ದರು.


ಅಧ್ಯಾಪಕರಾದ ಹರಿಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿದರು. ಒಂಬತ್ತನೇ ತರಗತಿಯ ಕಿಶೋರ ಕೃಷ್ಣ ಸ್ವಾಗತಿಸಿ, ಕುಮಾರಿ ಪ್ರೇರಣಾ ವಂದಿಸಿದರು. ವಿದ್ಯಾರ್ಥಿಗಳಾದ ಭವಿಷ್ ಹಾಗೂ ರೋಹನ್ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಸಮಸ್ತ ಅಧ್ಯಾಪಕ ವೃಂದದವರು ಕಾರ್ಯಕ್ರಮದ ನೇತೃತ್ವ ವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top