ಪುತ್ತೂರು: 2026ರ ಮೇ ತಿಂಗಳಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಅಂತಿಮ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜು (ಸ್ವಾಯತ್ತ) ಪುತ್ತೂರು ಇಲ್ಲಿನ ಹಿರಿಯ ವಿದ್ಯಾರ್ಥಿನಿ ಅನನ್ಯಲಕ್ಷ್ಮಿ ಉತ್ತೀರ್ಣರಾಗಿದ್ದಾರೆ.
ಇವರು ಪುತ್ತೂರಿನ ಕಬಕ ಸಮೀಪದ ಶ್ರೀಕೃಷ್ಣ ಭಟ್ ವಡ್ಯ ಮತ್ತು ಶ್ರೀಮತಿ ಮಂಗಳ ಗೌರಿ ದಂಪತಿಗಳ ಸುಪುತ್ರಿ. ಪ್ರಸ್ತುತ ಸಿಎ ಹರೀಶ್ ಭಾರಧ್ವಾಜ್ ಕೆ. ಅವರ ಧರ್ಮಪತ್ನಿಯಾಗಿ ಮೆಲ್ಕಾರ್ ಸಮೀಪದ ಕೋಮಲೆಯಲ್ಲಿ ವಾಸವಾಗಿದ್ದು, ಶೆಣೈ & ಭಾರಧ್ವಾಜ್ ಚಾರ್ಟರ್ಡ್ ಅಕೌಂಟೆಂಟ್ಸ್, ಮಂಗಳೂರು ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಧಕ ವಿದ್ಯಾರ್ಥಿನಿಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


