ವಿವೇಕಾನಂದ ಪ.ಪೂ. ಕಾಲೇಜು: ವಾಣಿಜ್ಯ ಮತ್ತು ವೃತ್ತಿಪರ ಕೋರ್ಸ್ಗಳ ಮಾಹಿತಿ ಕಾರ್ಯಾಗಾರ

Upayuktha
0

            


ಪುತ್ತೂರು: ಇಲ್ಲಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ʻಉದ್ಯೋಗಾವಕಾಶಗಳು ಮತ್ತು ವೃತ್ತಿಪರ ಕೋರ್ಸ್ಗಳುʼ ಎಂಬ ವಿಶೇಷ ಮಾಹಿತಿ ಮತ್ತು ಕೌಶಲ್ಯಾಭಿವೃದ್ದಿ ಕಾರ್ಯಾಗಾರವು ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆಯಿತು. 


ಪ್ರಸ್ತುತ ವಾಣಿಜ್ಯ ಕ್ಷೇತ್ರದಲ್ಲಿ ವಿಪುಲ ಉದ್ಯೋಗವಕಾಶಗಳಿದ್ದು ವಿದ್ಯಾರ್ಥಿಗಳು ಸಿ.ಎ ಹಾಗೂ ಸಿ.ಎಸ್‌ನಂತಹ ಉನ್ನತ ವೃತ್ತಿಪರ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬಹುದು ಎಂಬ ಮಾಹಿತಿಯನ್ನು  ವಾಣಿಜ್ಯ ವಿಭಾಗದ ಉಪನ್ಯಾಸಕಿ ಉಷಾ ಎ. ಎಮ್. ನೀಡಿದರು. 


ಇಂದಿನ ಆಧುನಿಕ ಯುಗದಲ್ಲಿ ಕೌಶಲ್ಯಾಭಿವೃದ್ಧಿಯ ಅಗತ್ಯತೆ, ಸಾಪ್ಟ್ವೇರ್ ಜ್ಞಾನ, ಷೇರು ಮಾರುಕಟ್ಟೆ ಮತ್ತು ಮ್ಯೂಚ್‌ವಲ್ ಫಂಡ್ ಹಾಗೂ ಟ್ಯಾಲಿ-ಸರ್ಟಿಫಿಕೇಟ್ ಕೋರ್ಸ್ ಗಳ ಬಗ್ಗೆ ಮಾಹಿತಿಯನ್ನು ವಾಣಿಜ್ಯ ವಿಭಾಗದ ಉಪನ್ಯಾಸಕಿ ಗ್ರೀಷ್ಮ ಕೆ. ಎಸ್ ತಿಳಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು ಉಪಸ್ಥಿತರಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top