ಪುತ್ತೂರು: ಭಾರತದಲ್ಲಿರುವಂತಹ ಉತ್ತಮ ಮತದಾನ ವ್ಯವಸ್ಥೆ ವಿಶ್ವದಲ್ಲೇ ಮಾದರಿಯಾಗಿದೆ. ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇರುವಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಅದಕ್ಕಾಗಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಭಾಗವಹಿಸುವುದು ಅತ್ಯಂತ ಮುಖ್ಯ. ಇದು ಸಾಮಾಜಿಕ ಬದ್ಧತೆಯಾಗಿದ್ದು, ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ವಿವೇಕಾನಂದ ಪದವಿ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ.ಎನ್ ಹೇಳಿದರು.
ಅವರು ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ಪುತ್ತೂರು ತಾಲೂಕು ಪಂಚಾಯತ್, ಎಸ್‌ವಿಇಇಪಿ ಮತ್ತು ಮತದಾರರ ಸಾಕ್ಷರತಾ ಕ್ಲಬ್ ಹಾಗೂ ಐಕ್ಯೂಎಸಿ ಘಟಕದ ವತಿಯಿಂದ ಆಯೋಜಿಸಲಾದ ಎಸ್‌ಐಆರ್ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪುತ್ತೂರು ತಾಲೂಕು ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಪಾಲ್ಗೊಳ್ಳುವಿಕೆ (ಎಸ್‌ವಿಇಇಪಿ) ಕಾರ್ಯಕ್ರಮದ ಸಂಯೋಜಕ ನವೀನ್ ಕುಮಾರ್ ಭಂಡಾರಿ ಮಾತನಾಡಿ, ಪ್ರಜಾಪ್ರಭುತ್ವದ ಮುಖ್ಯ ಅಡಿಪಾಯ ಮತದಾನ. ಮತದಾನ ಪ್ರತಿಯೊಬ್ಬ ಭಾರತೀಯನ ಹಕ್ಕು. ಮತದಾರರ ಪಟ್ಟಿಗೆ ಸಂಬAಧಿಸಿದ ಗೊಂದಲಗಳನ್ನು ನಿವಾರಿಸಲು ಎಸ್‌ಐಆರ್ ಅಗತ್ಯ. ಇದರೊಂದಿಗೆ ಪ್ರತಿಯೊಬ್ಬ ಅರ್ಹ ಮತದಾರ ಮತದಾನದಲ್ಲಿ ಸಕ್ರೀಯವಾಗಿ ಭಾಗವಹಿಸಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಮಾತನಾಡಿ, ಪ್ರಜಾಪ್ರಭುತ್ವ ರಾಷ್ಟçದಲ್ಲಿ ಮತದಾನದ ಹಕ್ಕಿಗೆ ಮೊದಲ ಆದ್ಯತೆ ನೀಡಬೇಕು. ಅದಕ್ಕಾಗಿ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದು ಅತ್ಯಗತ್ಯ ಎಂದು ತಿಳಿಸಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಎಸ್‌ಐಆರ್‌ನ ಮಾಸ್ಟರ್ ಟ್ರೈನರ್ ಹರಿಪ್ರಸಾದ್.ಎಸ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ವೇದಿಕೆಯಲ್ಲಿ ಮತದಾರರ ಸಾಕ್ಷರತಾ ಕ್ಲಬ್‌ನ ವಿದ್ಯಾರ್ಥಿ ನಾಯಕ ದ್ವಿತೀಯ ಬಿಬಿಎ ವಿಭಾಗದ ಅವನೀಶ್ ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥ ಪ್ರಮೋದ್.ಎಂ.ಜಿ ಸ್ವಾಗತಿಸಿ, ಮತದಾರರ ಸಾಕ್ಷರತಾ ಕ್ಲಬ್‌ನ ಕನ್ವೀನರ್, ವ್ಯವಹಾರ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ದೀಪಿಕಾ ವಂದಿಸಿದರು. ತೃತೀಯ.ಬಿ.ಎ ವಿಭಾಗದ ಶ್ರೀರಕ್ಷಾ ಕಾರ್ಯಕ್ರಮವನ್ನು ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

