ಮುಜುಂಗಾವು: ಇಲ್ಲಿನ ಶ್ರೀ ಭಾರತಿ ವಿದ್ಯಾಪೀಠದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಹಯೋಗದಿಂದ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಆನ್ಲೈನ್ ಕಾರ್ಯಕ್ರಮದ ಮೂಲಕ ಆಚರಿಸಲಾಯಿತು.
ಡಾ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ. ಹೇಮಾವತಿ ಅಮ್ಮನವರು ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನವನ್ನು ನೀಡಿದರು .
ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ವೆಂಕಟೇಶ್ ಪ್ರಸನ್ನ, ಸ್ಪೆಷಲ್ ಪೊಲೀಸ್ ಆಫೀಸರ್, ಬೆಂಗಳೂರು ಹಾಗೂ ಡಾ.ದೇವಿ ಪ್ರಸಾದ್ ಶೆಟ್ಟಿ ಖ್ಯಾತ ಹೃದ್ರೋಗ ತಜ್ಞರು, ಬೆಂಗಳೂರು ಇವರು ವಿದ್ಯಾರ್ಥಿಗಳಿಗೆ ಮಾದಕ ವಸ್ತುವಿನ ಉಪಯೋಗದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿವರಿಸಿದರು.
ಡಾ. ವೆಂಕಟೇಶ್ ಪ್ರಸಾದ್ ಮಾತನಾಡಿ ಒಬ್ಬ ವಿದ್ಯಾರ್ಥಿಯು ಮಾದಕ ವಸ್ತುವಿನ ವ್ಯಸನಿಯಾದರೆ ಅವನಿಂದ ನಾಶವಾಗುವುದು ಇಡೀ ಕುಟುಂಬ ಹಾಗೂ ಸಮಾಜ ಎಂದರು
ಡಾ.ದೇವಿ ಪ್ರಸಾದ್ ಶೆಟ್ಟಿ ಅವರು ಮಕ್ಕಳಿಗೆ ಮಾದಕ ವಸ್ತು ಸೇವನೆಯಿಂದಾಗಿ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮದ ಕುರಿತು ವಿವರಿಸಿದರು.
ಮಂಜೇಶ್ವರ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀಮತಿ ಶಶಿಕಲಾ ಸುವರ್ಣ, ಜನಜಾಗೃತಿ ವೇದಿಕೆ ವಲಯ ಅಧ್ಯಕ್ಷರು ಕುಂಬಳೆ ವಲಯ, ಮೇಲ್ವಿಚಾರಕರಾದ ಅಭಿಷೇಕ್, ಸೇವಾಪ್ರತಿನಿಧಿ ಸ್ವರ್ಣಲತಾ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಶಾಂಭಟ್ ದರ್ಬೆ ಮಾರ್ಗ ಸಹ ಮುಖ್ಯ ಶಿಕ್ಷಕಿ ಶ್ರೀಮತಿ ಚಿತ್ರಾ ಸರಸ್ವತಿ ಯವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


