ಯುವವಾಹಿನಿ ಕೊಲ್ಯ ಘಟಕದ ಪದಗ್ರಹಣ

Upayuktha
0

 ರಾಜ್ಯ ಮಟ್ಟದ ಸಾಹಿತ್ಯ ಸ್ಪರ್ಧೆಯ ಬಹುಮಾನ ಹಾಗೂ ವಿದ್ಯಾನಿಧಿ ವಿತರಣೆ



ಕೊಲ್ಯ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಯುವವಾಹಿನಿ (ರಿ.) ಕೊಲ್ಯ ಘಟಕದ ೨೦೨೬-೨೭ನೇ ಸಾಲಿನ ನಿಯೋಜಿತ ಕಾರ್ಯಕಾರಿ ಸಮಿತಿಯ ಪದಗ್ರಹಣ, ವಿದ್ಯಾನಿಧಿ ವಿತರಣೆ ಹಾಗೂ ರಾಜ್ಯ ಮಟ್ಟದ ಸಾಹಿತ್ಯ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಕೊಲ್ಯದ ಬ್ರಹ್ಮಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ವಿಜೃಂಭಣೆಯಿಂದ ನೆರವೇರಿತು.


ಕಾರ್ಯಕ್ರಮದ ಅಧಿಕೃತ ಚಾಲನೆಗೆ ಮುನ್ನ ಯುವವಾಹಿನಿ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು. ಬಳಿಕ ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಸೋಮೇಶ್ವರ ಇದರ ಅಧ್ಯಕ್ಷರಾದ ಶೇಷಪ್ಪ ಬೈದ್ಯಮನೆ ಅವರು ದೀಪ ಬೆಳಗಿಸಿ ಸಮಾರಂಭವನ್ನು ಉದ್ಘಾಟಿಸಿದರು. ಯುವವಾಹಿನಿ ಕೊಲ್ಯ ಘಟಕದ ಅಧ್ಯಕ್ಷ ನಿತಿನ್ ಕರ್ಕೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಡು ನೂತನ ಪದಾಧಿಕಾರಿಗಳಿಗೆ ಹಾಗೂ ಕಾರ್ಯಕಾರಿ ಸಮಿತಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.


ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಎಸ್.ಆರ್.ಆರ್ ಮಸಾಲಾ ಸಂಸ್ಥೆಯ ಸಂಸ್ಥಾಪಕ ಶೈಲೇಂದ್ರ ವೈ. ಸುವರ್ಣ, ಮಂಗಳೂರಿನ ಸೇಂಟ್ ಅಲೋಶಿಯಸ್ ಪಿ.ಯು ಕಾಲೇಜಿನ ಪ್ರಾಧ್ಯಾಪಕ ಮೋಹನ್ ರಾಜ್ ಮತ್ತು ಕೆನರಾ ಬ್ಯಾಂಕ್‌ನ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಗೀತಾ ಯಶೋಧರ್ ಸಂಸ್ಥೆಯ ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಗಳನ್ನು ಶ್ಲಾಘಿಸಿ ಶುಭಹಾರೈಸಿದರು. ವೇದಿಕೆಯಲ್ಲಿ ಪ್ರಮುಖರಾದ ಗಣೇಶ್ ಕೆ. ಮಹಾಕಾಳಿ, ಗೋಪಾಲ್ ಎಸ್. ಕೊಂಡಾಣ ಹಾಗೂ ತ್ರಿವೇಣಿ ಉದಯ್ ಕುಂಪ್ಲ ಉಪಸ್ಥಿತರಿದ್ದರು.


ಸಾಹಿತ್ಯ ಸ್ಪರ್ಧೆ ಹಾಗೂ ಬಹುಮಾನ ವಿತರಣೆ:

ಕರಾವಳಿ ತೀರದ ಹೆಮ್ಮೆಯ ಸಾಹಿತಿ, ಜನಪದ ವಿದ್ವಾಂಸ ದಿ. ರಮಾನಾಥ್ ಕೋಟೆಕಾರ್ ಅವರ ಜನ್ಮದಿನದ ಪ್ರಯುಕ್ತ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಆನ್‌ಲೈನ್ ಕಥೆ ಮತ್ತು ಕವನ ಸ್ಪರ್ಧೆಯ ಬಹುಮಾನಗಳನ್ನು ಕಾರ್ಯಕ್ರಮದ ಪ್ರಾಯೋಜಕಿ ಆಶಾ ರಮಾನಾಥ್ ಕೋಟೆಕಾರ್ ವಿಜೇತರಿಗೆ ಪ್ರದಾನ ಮಾಡಿದರು. ರಾಜ್ಯದಾದ್ಯಂತ ಸಾಹಿತ್ಯಾಸಕ್ತರು ಭಾಗವಹಿಸಿದ್ದ ಈ ಸ್ಪರ್ಧೆಯ ಕಥಾ ವಿಭಾಗದಲ್ಲಿ ಡಾ. ಸುರೇಶ್ ನೆಗಳಗುಳಿ ಅವರ ‘ಅನಾವರಣ’ ಕಥೆಯು ಪ್ರಥಮ ಬಹುಮಾನವಾಗಿ ೧೦,೦೦೦ ರೂಪಾಯಿ ನಗದನ್ನು ಪಡೆದುಕೊಂಡಿತು. ಕವನ ಸ್ಪರ್ಧೆಯಲ್ಲಿ ರಮ್ಯಾ ರಘುಪತಿ ಕೊಕ್ಕಡ ಅವರು ೭,೫೦೦ ರೂಪಾಯಿ ನಗದು ಸಹಿತ ಪ್ರಥಮ ಬಹುಮಾನ ಪಡೆದರು. ಉಳಿದ ದ್ವಿತೀಯ, ತೃತೀಯ ಹಾಗೂ ಸಮಾಧಾನಕರ ಬಹುಮಾನಗಳನ್ನು ಹಿತೇಶ್ ಕುಮಾರ್, ಚೇತನ್ ವರ್ಕಾಡಿ ಮತ್ತಿತರರಿಗೆ ವಿತರಿಸಲಾಯಿತು.


ಲತೀಶ್ ಸಂಕೋಳಿಗೆ ಅವರ ಸಾರಥ್ಯದಲ್ಲಿ ನಡೆದ ಈ ಸ್ಪರ್ಧೆಗೆ ಹಿರಿಯ ಸಾಹಿತಿ ಸತ್ಯವತಿ ಭಟ್ ಕೊಳಚಪ್ಪು ಹಾಗೂ ವ. ಉಮೇಶ ಕಾರಂತ ತೀರ್ಪುಗಾರರಾಗಿ ಸಹಕರಿಸಿದ್ದರು.


ಇದೇ ಸಂದರ್ಭದಲ್ಲಿ ಅರ್ಹ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಧನಸಹಾಯವನ್ನು ವಿತರಿಸಲಾಯಿತು. ಸಮಾರಂಭದಲ್ಲಿ ನಿಯೋಜಿತ ಅಧ್ಯಕ್ಷ ಜೀವನ್ ಕೊಲ್ಯ, ಕಾರ್ಯದರ್ಶಿ ಸೌಮ್ಯ ಯೋಗೀಶ್, ನಿಯೋಜಿತ ಕಾರ್ಯದರ್ಶಿ ಮುಕೇಶ್ ಕಿನ್ನಿ ಸೇರಿದಂತೆ ಕೊಲ್ಯ ಘಟಕದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top