ಬಂಟ್ವಾಳ: ಇಲ್ಲಿನ ಬರಿಮಾರು ಸಮೀಪದ ಕಲ್ಲೆಟ್ಟಿ ದೈವಸ್ಥಾನದ ಬಳಿ ಬುಧವಾರ ಸಂಜೆ ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಲ್ಲಡ್ಕ ಶ್ರೀರಾಮ ಶಾಲೆಯ ಒಂದು ಮಗು ಮೃತಪಟ್ಟಿದೆ.
ಬಂಟ್ವಾಳ ತಾಲೂಕು ಬರಿಮಾರು ಗ್ರಾಮದ ಕಲ್ಲೇಟಿ ಎಂಬಲ್ಲಿನ ಶ್ರೀ ಕಾನಲ್ತಾಯ ದೈವಸ್ಥಾನ ದ ಬದಿಯ ಮರವೊಂದು ಚಲಿಸುತ್ತಿದ್ದ ಶಾಲಾ ವಾಹನದ ಮೇಲೆ ಬಿದ್ದು, ಸುಮಾರು 6 ವರ್ಷ ಪ್ರಾಯದ ಚಿರ ಎಂಬ ಹೆಣ್ಣು ಮಗು ಮೃತ ಪಟ್ಟು, 4 ಜನ ಮಕ್ಕಳಿಗೆ ಗಾಯಗೊಂಡಿರುವುದಾಗಿ ತಿಳಿದುಬಂದಿದ್ದು, ಮಕ್ಕಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಶಾಲೆ ಮುಗಿಸಿ ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದ ವೇಳೆಯಲ್ಲಿ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಹಲವು ಮಕ್ಕಳು ಗಾಯಗೊಂಡಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

