ಕಾರ್ಗಿಲ್ ವಿಜಯ ದಿನ: ಎಸ್‌ಡಿಎಂ ಉಜಿರೆ ಎನ್‌ಎಸ್‌ಎಸ್‌ನಿಂದ ಕಾರ್ಗಿಲ್ ವನಕ್ಕೆ ಭೇಟಿ

Upayuktha
0



ಉಜಿರೆ: ಕಾರ್ಗಿಲ್ ವಿಜಯ ದಿನದ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರಸೈನಿಕರ ಸ್ಮರಣಾರ್ಥ ನಿರ್ಮಿಸಲಾದ ಕಾರ್ಗಿಲ್ ವನಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸಲಾಯಿತು.


ಕಾರ್ಗಿಲ್ ವನದ ರೂವಾರಿ ಸಚಿನ್ ಭಿಡೆ ಮಾತನಾಡಿ, “ನಾವೆಲ್ಲರೂ ಇಂದು ನೆಮ್ಮದಿಯಿಂದ ಬದುಕುತ್ತಿದ್ದೇವೆ ಎಂದರೆ ಅದಕ್ಕೆ ನಮ್ಮ ಸೈನಿಕರ ತ್ಯಾಗವೇ ಕಾರಣ. ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ 527 ವೀರಸೈನಿಕರ ನೆನಪಿಗಾಗಿ ಇಲ್ಲಿ 527 ಗಿಡಗಳನ್ನು ನೆಡಲಾಗಿದೆ.

ಪ್ರತಿಯೊಂದು ಗಿಡವೂ ಒಬ್ಬೊಬ್ಬ ವೀರಸೈನಿಕರ ಅಮರ ತ್ಯಾಗದ ಸಂಕೇತವಾಗಿದೆ. ಈ ವನವು ದೇಶಭಕ್ತಿಯ ಸಂದೇಶವನ್ನು ಮುಂದಿನ ಪೀಳಿಗೆಗೆ ಸಾರುವ ಪವಿತ್ರ ತಾಣವಾಗಿದೆ,” ಎಂದು ಹೇಳಿದರು.


ಎನ್‌ಎಸ್‌ಎಸ್ ಯೋಜನಾಧಿಕಾರಿ ವಿಶ್ವನಾಥ್ ಎಸ್. ಮಾತನಾಡಿ, “ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ವೀರ ಯೋಧರನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಕಾರ್ಗಿಲ್ ವನವು ಹುತಾತ್ಮರ ತ್ಯಾಗವನ್ನು ನೆನಪಿಸುವುದರ ಜೊತೆಗೆ ಯುವಜನರಲ್ಲಿ ದೇಶಪ್ರೇಮವನ್ನು ಬೆಳೆಸುವ ಕಾರ್ಯವನ್ನು ಮಾಡುತ್ತಿದೆ,” ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರು ಗಿಡಗಳನ್ನು ನೆಡುವ ಮೂಲಕ ವೀರಸೈನಿಕರಿಗೆ ಗೌರವ ನಮನ ಸಲ್ಲಿಸಿದರು.


ಕಾರ್ಯಕ್ರಮದಲ್ಲಿ ಸಹಯೋಜನಾಧಿಕಾರಿ ಶೋಭಾ ಪಿ. ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಸ್ವಯಂಸೇವಕಿ ಸುಪೇಕ್ಷಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top