ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸಮ್ಮೇಳನ "ಇನ್ನೋವ್‌ಹೆಲ್ತ್'26" ಯಶಸ್ವಿ

Upayuktha
0

 


ಮಂಗಳೂರು: ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ (ಐಎಎಚ್‌ಎಸ್), ಶ್ರೀನಿವಾಸ ವಿಶ್ವವಿದ್ಯಾಲಯ, ಕರ್ನಾಟಕ ಸ್ಟೇಟ್ ಅಲೈಡ್ ಹೆಲ್ತ್‌ಕೇರ್ ಕೌನ್ಸಿಲ್ ಸಹಯೋಗದಲ್ಲಿ ಜುಲೈ 24 ಮತ್ತು 25ರಂದು ಮಂಗಳೂರಿನ ಶ್ರೀನಿವಾಸ್ ಹೋಟೆಲ್‌ನಲ್ಲಿ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ "ಇನ್ನೋವ್‌ಹೆಲ್ತ್'26" ಅನ್ನು ಯಶಸ್ವಿಯಾಗಿ ಆಯೋಜಿಸಿತು. 'ಬ್ರಿಡ್ಜಿಂಗ್ ಸೈನ್ಸ್, ಪ್ರಾಕ್ಟೀಸ್ ಆ್ಯಂಡ್ ಇನ್ನೋವೇಶನ್ ಇನ್ ಹೆಲ್ತ್‌ಕೇರ್'ಎಂಬ ಧ್ಯೇಯವಾಕ್ಯದಡಿ ನಡೆದ ಈ ಸಮ್ಮೇಳನದಲ್ಲಿ ದೇಶದ 23 ಯೂನಿವರ್ಸಿಟಿಗಳು ಹಾಗೂ ಶಿಕ್ಷಣ ಸಂಸ್ಥೆಗಳಿಂದ ಒಟ್ಟು 612 ಪ್ರತಿನಿಧಿಗಳು ನೋಂದಾಯಿಸಿಕೊಂಡಿದ್ದು, 135 ರಿಸರ್ಚ್ ಆ್ಯಬ್ಸ್ಟ್ರಾಕ್ಟ್‌ಗಳು ಮೌಖಿಕ ಹಾಗೂ ಪೋಸ್ಟರ್ ಪ್ರಸ್ತುತಿಗಳಿಗಾಗಿ ಸ್ವೀಕರಿಸಲ್ಪಟ್ಟವು.


ಸಮ್ಮೇಳನವನ್ನು ಬೆಂಗಳೂರಿನ ಗಾರ್ಡನ್ ಸಿಟಿ ಯೂನಿವರ್ಸಿಟಿಯ ಪ್ರೊಫೆಸರ್ ಹಾಗೂ ರಿಸರ್ಚ್ ಕೋಆರ್ಡಿನೇಟರ್ ಡಾ. ಜಯಕುಮಾರ್ ಉದ್ಘಾಟಿಸಿ, ಸಮಾಜದ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಅಲೈಡ್ ಹೆಲ್ತ್‌ಕೇರ್ ವೃತ್ತಿಪರರ ಮಹತ್ವದ ಪಾತ್ರವನ್ನು ವಿವರಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯ ಗೌರವಾನ್ವಿತ ಕುಲಾಧಿಪತಿ ಡಾ. ಎ. ಶ್ರೀನಿವಾಸ ರಾವ್, ಬೋರ್ಡ್ ಆಫ್ ಗವರ್ನರ್ಸ್‌ನ ಟ್ರಸ್ಟಿ ಸದಸ್ಯರಾದ ಎ. ವಿಜಯಲಕ್ಷ್ಮಿ ಆರ್. ರಾವ್ ಹಾಗೂ ಪ್ರೊ. ಪ್ರೊ. ಇರ್. ಶ್ರೀಮತಿ ಎ. ಮಿತ್ರಾ ಎಸ್. ರಾವ್, ರಿಜಿಸ್ಟ್ರಾರ್ ಡಾ. ಅನಿಲ್ ಕುಮಾರ್, ರಿಜಿಸ್ಟ್ರಾರ್ (ಡೆವಲಪ್‌ಮೆಂಟ್) ಡಾ. ಅಜಯ್ ಕುಮಾರ್, ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ನ ಡೀನ್ ಹಾಗೂ ಆರ್ಗನೈಸಿಂಗ್ ಚೇರ್‌ಪರ್ಸನ್ ಡಾ. ಪಾವನಾ ಕೃಷ್ಣಮೂರ್ತಿ, ಕನ್ವೀನರ್ ಸವಿನ್ ಕೆ.ವಿದ್ಯಾನ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.


ಎರಡು ದಿನಗಳ ಸಮ್ಮೇಳನದಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಎಮರ್ಜೆನ್ಸಿ ಹಾಗೂ ರೆಸ್ಪಿರೇಟರಿ ಕೇರ್, ಮೆಡಿಕಲ್ ಲ್ಯಾಬೊರೇಟರಿ ಟೆಕ್ನಾಲಜಿ, ಡಿಜಿಟಲ್ ಸೈಕಿಯಾಟ್ರಿ, ಮೆಡಿಕಲ್ ಇಮೇಜಿಂಗ್, ಡಯಾಗ್ನೋಸ್ಟಿಕ್ಸ್ ಹಾಗೂ ಹೆಲ್ತ್‌ಕೇರ್ ಕ್ಷೇತ್ರದ ಸೈಬರ್ ಸೆಕ್ಯುರಿಟಿ ಸೇರಿದಂತೆ ವಿವಿಧ ವಿಷಯಗಳ ಕುರಿತು ದೇಶದ ಪ್ರಮುಖ ತಜ್ಞರು ತಾಂತ್ರಿಕ ಉಪನ್ಯಾಸಗಳನ್ನು ನೀಡಿದರು. ಜೊತೆಗೆ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳ ನವೀನ ಸಂಶೋಧನಾ ಕಾರ್ಯಗಳನ್ನು ಒಳಗೊಂಡ ಮೌಖಿಕ ಮತ್ತು ಪೋಸ್ಟರ್ ಪ್ರಸ್ತುತಿಗಳೂ ನಡೆಯುವ ಮೂಲಕ ಸಮ್ಮೇಳನಕ್ಕೆ ವಿಶೇಷ ಮೆರುಗು ನೀಡಿದವು.


ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ಸ್ಟೇಟ್ ಅಲೈಡ್ ಹೆಲ್ತ್‌ಕೇರ್ ಕೌನ್ಸಿಲ್ ಅಧ್ಯಕ್ಷ ಡಾ. ಯು. ಟಿ. ಇಫ್ತಿಕಾರ್ ಫರೀದ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ದೇಶಾದ್ಯಂತ ಅಲೈಡ್ ಹೆಲ್ತ್‌ಕೇರ್ ಶಿಕ್ಷಣಕ್ಕೆ ಏಕರೂಪದ ಪಠ್ಯಕ್ರಮದ ಅಗತ್ಯವನ್ನು ಒತ್ತಿ ಹೇಳಿದರು. ವಿವಿಧ ವಿಭಾಗಗಳ ಮೌಖಿಕ ಹಾಗೂ ಪೋಸ್ಟರ್ ಪ್ರಸ್ತುತಿಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top