ಪಾದುವಾ ಕಾಲೇಜಿನಲ್ಲಿ ದತ್ತಿ ಉಪನ್ಯಾಸ

Upayuktha
0


ಮಂಗಳೂರು: ಪಾದುವಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೆಜ್ಮೆಂಟ್‌ನ ಸಾಹಿತ್ಯ ಸಂಘ ಹಾಗೂ ಭಾಷಾ ವಿಭಾಗ ಹಾಗೂ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ‘ಸಣ್ಣ ಪತ್ರಿಕೆಗಳು ಮತ್ತು ಗ್ರಾಮೀಣ ಬದುಕು-ಶಿಕ್ಷಣ ನೀತಿ’ ಎನ್ನುವ ವಿಷಯದಲ್ಲಿ ದತ್ತಿ ಉಪನ್ಯಾಸವು ಶುಕ್ರವಾರ (ಜುಲೈ 31) ನಡೆಯಿತು.


ದತ್ತಿ ಉಪನ್ಯಾಸದ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಮಾತನಾಡಿದ ಪಾದುವಾ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಗುರು ಅರುಣ್ ವಿಲ್ಸನ್ ಲೋಬೋ ಸಾಹಿತ್ಯ ಪರಿಷತ್ತಿನ ಕಾರ್ಯಗಳನ್ನು ಶ್ಲಾಘಿಸಿದರು. 

ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತ ಗ್ರಾಮೀಣ ಪ್ರದೇಶಗಳಲ್ಲಿ ದಿನ ಪತ್ರಿಕೆಗಳು ವಿದ್ಯಾರ್ಥಿಗಳ ಬೆಳವಣಿಗೆಗೆ ಹೇಗೆ ಪೂರಕವಾಗಿದ್ದುವು ಎನ್ನುವುದನ್ನು ತಿಳಿಸಿದರು.


ಉದಯವಾಣಿ ವರದಿಗಾರರಾದ ಶ್ರೀ ಉದಯಶಂಕರ್ ನೀರ್ಪಾಜೆ ತಮ್ಮ ಉಪನ್ಯಾಸದಲ್ಲಿ, ಪತ್ರಿಕೆಗಳ ಅದರಲ್ಲೂ ಸಣ್ಣ ಪತ್ರಿಕೆಗಳು ಹಳ್ಳಿ ಹಳ್ಳಿಗಳಲ್ಲಿ ಓದುಗರನ್ನು ನಿರ್ಮಿಸಿದ, ಬೆಳೆಸಿದ ನೆಲೆಗಳನ್ನು ತಿಳಿಸಿದರು. ಹಿಂದಿನ ತಲೆಮಾರು ಪತ್ರಿಕೆಗಳಿಂದಲೇ ತಮ್ಮ ದಿನಚರಿ ಆರಂಭಿಸುತ್ತಿದ್ದುದರ ಕುಳಿತು ತಿಳಿಸಿ, ಇಂದಿನ ತಲೆಮಾರು ಪತ್ರಿಕೆಗಳಿಂದ ದೂರ ಸರಿದಿರುವುದರ ಕುರಿತು ಖೇದ ವ್ಯಕ್ತಪಡಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಸಾಹಿತ್ಯ ಪರಿಷತ್ತಿನ ಕುರಿತು ಮಾತನಾಡಿದರು. ಯುವ ಪೀಳಿಗೆ ಇಂತಹ ಸಾಹಿತ್ಯಿಕ ಕಾರ್ಯಕ್ರಮಗಳಿಗೆ ಹಾಜರಗುವುದರಿಂದ ಅವರ ವ್ಯಕ್ತಿತ್ವ ವಿಕಸನ ಹಾಗೂ ಜ್ಞಾನ ವೃದ್ಧಿಯಾಗುವುದನ್ನು ಉದಾಹರಣೆಯ ಮೂಲಕ ತಿಳಿಸಿದರು.


ಉಪನ್ಯಾಸದ ದತ್ತಿಯ ಪ್ರಾಯೋಜಕರಾದ ಕಲಾದರ್ಶನದ ಶ್ರೀ ಭಾಸ್ಕರ ಹೊಸಮನೆ ಕಾಲೇಜಿನ ಸಾಹಿತ್ಯ ಸಂಘದ ಸಂಯೋಜಕಿ ಹಾಗೂ ಪ್ರಾಧ್ಯಾಪಕಿ ಪ್ರೊ. ಅಕ್ಷಯ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಭಾಷಾ ವಿಭಾಗದ ಮುಖ್ಯಸ್ಥರಾದ ಶ್ರೀ ರಮೇಶ್ ವಂದಿಸಿದರು.


ವಿದ್ಯಾರ್ಥಿನಿ ಪವಿತ್ರ ಕಾರ್ಯಕ್ರಮ ನಿರ್ವಹಿಸಿದರು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸದಸ್ಯರಾದ ಶ್ರೀ ಸನತ್ ಕುಮಾರ್ ಜೈನ್ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top