ಉಜಿರೆ ಕಾಲೇಜಿನಲ್ಲಿ ಜು.22 ರಂದು ಅವರು ಸಸ್ಯಶಾಸ್ತ್ರ ವಿಭಾಗದ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆ ಮತ್ತು ಸಸ್ಯಸೌರಭ ಹಾಗೂ ಇಕೋ ಕ್ಲಬ್ ಅನ್ನು ಉದ್ಘಾಟಿಸಿ., ಈಶ್ವರಮಂಗಲದ ಡಾ| ವೆಂಕಟೇಶ ಜಿ. ಹಾಗೂ ಡಾ| ಸೌಮ್ಯ ಸಿ. ಆರ್. ವೈದ್ಯ ದಂಪತಿ ವಿದ್ಯಾರ್ಥಿಗಳಿಗೆ ಆಯುರ್ವೇದ ಔಷಧಿಯಲ್ಲಿ ಸಸ್ಯಗಳ ಮಹತ್ವ ಹಾಗೂ ವೈದ್ಯಕೀಯ ಚಿಕಿತ್ಸೆಯ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ವಿಭಾಗದ ಭಿತ್ತಿಪತ್ರಿಕೆಯಾದ 'ಸಸ್ಯಸೌರಭ' ವನ್ನು ಬಿಡುಗಡೆಗೊಳಿಸಲಾಯಿತು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಪದಾಧಿಕಾರಿಗಳಿಗೆ ವಿಜ್ಞಾನ ನಿಕಾಯದ ಡೀನ್ ಡಾ.ಸವಿತಾ ರಾವ್ ಅವರು ಪ್ರಮಾಣವಚನವನ್ನು ಭೋದಿಸಿದರು.
ಕಾರ್ಯಕ್ರಮದಲ್ಲಿ ವಿಭಾಗದ ಪ್ರಾಧ್ಯಾಪಕರಾದ ಶ್ರೀ ಅಭಿಲಾಷ್ ಕೆ. ಎಸ್. ಸ್ವಾಗತಿಸಿ, ಶ್ರೀಮತಿ ಭವ್ಯ ಧನ್ಯವಾದವಿತ್ತರು.
ವಿಭಾಗದ ಶ್ರೀಮತಿ ಮಂಜುಶ್ರೀ, ಡಾ. ಸುದರ್ಶನ್ ಪಿ. ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಅನುಶ್ರೀ ಹಾಗೂ ಜಾಹ್ನವಿ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

