ಪುತ್ತೂರು, 30 ಜುಲೈ: ಸಂತ ಫಿಲೋಮಿನ (ಸ್ವಾಯತ್ತ) ಕಾಲೇಜಿನಲ್ಲಿಆಂಟಿ ಹ್ಯೂಮನ್ ಟ್ರಾಫಿಕಿಂಗ್ ಕ್ಲಬ್ ಹಾಗೂ ಇಂಗ್ಲಿಷ್ ವಿಭಾಗದ ಸಹಯೋಗದೊಂದಿಗೆ ವಿಶ್ವ ಮಾನವ ಕಳ್ಳಸಾಗಣೆ ವಿರೋಧಿ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ರೆ. ಡಾ ಆಂಟನಿ ಪ್ರಕಾಶ್ ಮೊಂತೇರೋ ಪ್ರತಿಯೊಬ್ಬ ಮನುಷ್ಯನೂ ಗೌರವದಿಂದ ಬದುಕುವ ಹಕ್ಕನ್ನು ಹೊಂದಿದ್ದಾನೆ. ಮೌಲ್ಯ ಆಧಾರಿತ ಶಿಕ್ಷಣವೇ ನಮ್ಮ ಯುವಕರನ್ನುಉತ್ತಮ ಪ್ರಜೆಗಳನ್ನಾಗಿ ಮಾಡುತ್ತದೆ.ಮಾನವೀಯತೆ ಇಲ್ಲದ ಶಿಕ್ಷಣ ನಿರರ್ಥಕ ಎಂದು ಹೇಳಿ,ಮಾನವ ಕಳ್ಳಸಾಗಣೆಯಂತಹ ಸಮಸ್ಯೆಯನ್ನು ಬೇರುಮಟ್ಟದಿಂದ ಕಿತ್ತುಹಾಕಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕೆಂದು ಕರೆ ನೀಡಿದರು..
ಸಂಪನ್ಮೂಲ ವ್ಯಕ್ತಿ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಸಂಯೋಜಕಿ ಶ್ರೀಮತಿ ಶ್ರೀಮಣಿ ಅವರು ಮಾನವ ಕಳ್ಳಸಾಗಣೆಯ ಕಾರಣಗಳು, ಪರಿಣಾಮಗಳು ಮತ್ತು ಅದನ್ನು ತಡೆಯುವ ಮಾರ್ಗಗಳ ಬಗ್ಗೆ ವಿಚಾರಗಳನ್ನು ಮಂಡಿಸಿದ ಅವರು, ಮಹಿಳೆಯರು, ಮಕ್ಕಳು ಮತ್ತು ದುರ್ಬಲ ವರ್ಗದ ಜನರು ಹೇಗೆ ಈ ಜಾಲಕ್ಕೆ ಬಲಿಯಾಗುತ್ತಾರೆ ಎಂಬುದನ್ನು ನೈಜ ಉದಾಹರಣೆಗಳೊಂದಿಗೆ ವಿವರಿಸಿ, ಜಾಗೃತಿ ಮತ್ತು ಶಿಕ್ಷಣವೇ ಈ ದುಷ್ಟತನವನ್ನು ಮಣಿಸುವ ಅಸ್ತ್ರ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೋ ಅವರು ಮಾನವ ಕಳ್ಳಸಾಗಣೆಯ ವಿರುದ್ಧ ಹೋರಾಡುವ ಪ್ರತಿಜ್ಞೆಯನ್ನು ಬೋಧಿಸಿದರು.
ವೇದಿಕೆ ಯಲ್ಲಿಇಂಗ್ಲೀಷ್ ವಿಭಾಗದ ಮುಖ್ಯಸ್ಧೆ ಹಾಗೂ ಮಾನವ ಕಳ್ಳಸಾಗಣೆ ವಿರೋಧಿ ಕ್ಲಬ್ ಸದಸ್ಯ ಕಾರ್ಯದರ್ಶಿ ಡಾ. ಭಾರತಿ ಎಸ್ ರೈ ಹಾಗೂ ಐಕ್ಯೂಎಸಿ ಸಔಯೋಜಕ ಡಾ. ಎದ್ವಿನ್ ಡಿಸೋಜಾ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಎಂ., ರಿಜಿಸ್ಟ್ರಾರ್ ಡಾ. ನಾರ್ಬರ್ಟ್ ಮಸ್ಕರೇನ್ಹಾಸ್ಸೇರಿದಂತೆ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.ಮಾನಸ ಮತ್ತು ಅಪರ್ಣ ಪ್ರಾರ್ಥಿಸಿ, ವಿಂಧ್ಯಾಶ್ರೀ ರೈ ಸ್ವಾಗತಿಸಿ ,ಸುಷ್ಮಾ ವಾಗ್ಲೇ ವಂದಿಸಿ ಆಯಿಷಾತ್ ಜಬೀನ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

