40 ವರ್ಷಗಳ ಸೇವೆಗೆ ಗೌರವದ ಬೀಳ್ಕೊಡುಗೆ: ಗೃಹ ರಕ್ಷಕರ ಸಮರ್ಪಣಾಭಾವ ಶ್ಲಾಘನೀಯ — ಡಾ. ಚೂಂತಾರು

Upayuktha
0

ಗೃಹರಕ್ಷಕ ದಳ ಪಣಂಬೂರು ಘಟಕದಿಂದ ಜಗದೀಶ್ ಅವರಿಗೆ ಸನ್ಮಾನ; ರಾಘವೇಂದ್ರ ಭಟ್ ಹಾಗೂ ರಮೇಶ್ ಶೆಟ್ಟಿಗಾರ್ ರಿಗೆ ಅಭಿನಂದನೆ


ಪಣಂಬೂರು: ಗೃಹರಕ್ಷಕ ದಳ ಪಣಂಬೂರು ಘಟಕದಲ್ಲಿ ಸುಮಾರು 40 ವರ್ಷಗಳ ಕಾಲ ಸುದೀರ್ಘ ಹಾಗೂ ಪ್ರಾಮಾಣಿಕ ಸೇವೆ ಸಲ್ಲಿಸಿದ ಜಗದೀಶ್ ಅವರಿಗೆ ಗೌರವಪೂರ್ವಕ ಬೀಳ್ಕೊಡುಗೆ ಹಾಗೂ ಸುದೀರ್ಘ ಸೇವೆ ಸಲ್ಲಿಸಿದ ರಾಘವೇಂದ್ರ ಭಟ್ ಮತ್ತು ರಮೇಶ್ ದೇವಾಡಿಗ ಅವರಿಗೆ ಅಭಿನಂದನಾ ಸಮಾರಂಭವು ಭಾನುವಾರ ಶ್ರೀ ನಂದನೇಶ್ವರ ದೇವಸ್ಥಾನ, ಪಣಂಬೂರು ಇಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ನಿವೃತ್ತ ಜಿಲ್ಲಾ ಸಮಾದೇಷ್ಟರಾದ ಡಾ. ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ, ಗೃಹರಕ್ಷಕ ದಳದ ಸೇವೆಯು ಪ್ರಾಮಾಣಿಕತೆ, ನಿಷ್ಠೆ, ಶಿಸ್ತು ಹಾಗೂ ನಿಸ್ವಾರ್ಥ ಸೇವೆಯ ಪ್ರತೀಕವಾಗಿದೆ. 

ಸಮಾಜದ ಸುರಕ್ಷತೆ ಹಾಗೂ ಸಾರ್ವಜನಿಕ ಸೇವೆಯಲ್ಲಿ ಗೃಹರಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ತಮ್ಮ ಸೇವಾವಧಿಯಲ್ಲಿ ಇಲಾಖೆಯ ಅಭಿವೃದ್ಧಿ ಹಾಗೂ ಸುಧಾರಣೆಗೆ ಸಾಧ್ಯವಾದಷ್ಟು ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ಕಾರ್ಯನಿರ್ವಹಿಸಿರುವುದಾಗಿ ಅವರು ತಿಳಿಸಿದರು.


ಸುದೀರ್ಘ ಸೇವೆ ಸಲ್ಲಿಸಿ ಗೌರವಕ್ಕೆ ಪಾತ್ರರಾದವರಿಗೆ ಮುಂದಿನ ಜೀವನದಲ್ಲಿ ಉತ್ತಮ ಆರೋಗ್ಯ, ಸಂತೋಷ ಹಾಗೂ ಯಶಸ್ಸು ದೊರೆಯಲಿ ಎಂದು ಹಾರೈಸಿದ ಅವರು, ಅವರ ಸೇವಾ ಮನೋಭಾವ ಇತರರಿಗೆ ಸದಾ ಮಾದರಿಯಾಗಲಿ ಎಂದು ಶುಭಕೋರಿದರು.


ಶ್ರೀ ನಂದನೇಶ್ವರ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಮಾಜಿ ಸೈನಿಕರಾದ ಶ್ರೀಧರ್ ಅವರು ಮಾತನಾಡಿ, ವ್ಯಕ್ತಿಯ ಸೇವೆಯನ್ನು ಗುರುತಿಸಿ ಗೌರವಿಸುವುದು ಅವರ ಸೇವೆಯ ಮೇಲಿನ ಪ್ರೀತಿ ಮತ್ತು ಗೌರವವನ್ನು ಪ್ರತಿಬಿಂಬಿಸುತ್ತದೆ. ಸುದೀರ್ಘ ಕಾಲ ಕರ್ತವ್ಯ ನಿರ್ವಹಿಸಿ ಇಲಾಖೆಗೆ ಸಲ್ಲಿಸಿದ ಸೇವೆ ಶ್ಲಾಘನೀಯವಾಗಿದ್ದು, ಸನ್ಮಾನಿತರ ಸೇವಾ ಮನೋಭಾವ ಹಾಗೂ ಕರ್ತವ್ಯನಿಷ್ಠೆ ಎಲ್ಲರಿಗೂ ಪ್ರೇರಣೆಯಾಗಲಿ ಎಂದು ಹೇಳಿದರು.


ಗೃಹರಕ್ಷಕ ದಳ ಪಣಂಬೂರು ಘಟಕದ ಘಟಕಾಧಿಕಾರಿ ಶ್ರೀ ಶಿವಪ್ಪ ನಾಯಕ್ ಅವರು ಮಾತನಾಡಿ, ಪ್ರತಿಯೊಬ್ಬರ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಗೌರವಿಸುವುದು ಅವರ ಸೇವೆಗೆ ಸಲ್ಲಿಸುವ ಅತ್ಯುತ್ತಮ ಗೌರವವಾಗಿದೆ. ಘಟಕದ ಕಾರ್ಯಚಟುವಟಿಕೆಗಳಿಗೆ ಹಿರಿಯ ಅಧಿಕಾರಿಗಳು ಹಾಗೂ ನಿವೃತ್ತ ಸಿಬ್ಬಂದಿ ನೀಡುತ್ತಿರುವ ಮಾರ್ಗದರ್ಶನ ಮತ್ತು ಸಹಕಾರ ಸದಾ ಪ್ರೇರಣೆಯಾಗಿದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಘಟಕದ ನಿವೃತ್ತ ಅಧಿಕಾರಿ ಹಾಗೂ ಹಿರಿಯರಾದ ಶ್ರೀ ಹರೀಶ್ ಆಚಾರ್ಯ ಅವರು ಉಪಸ್ಥಿತರಿದ್ದು, ಸನ್ಮಾನಿತರನ್ನು ಅಭಿನಂದಿಸಿ ಹಿತವಚನ ನೀಡಿದರು. ಅವರ ಉಪಸ್ಥಿತಿಯು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.


ಕಾರ್ಯಕ್ರಮದ ನಿರೂಪಣೆಯನ್ನು ಮಾಜಿ ಗೃಹರಕ್ಷಕ ದಳ ಪಣಂಬೂರು ಘಟಕದ  ಶ್ರೀ ಸುನಿಲ್ ಅವರು ಅಚ್ಚುಕಟ್ಟಾಗಿ ನಿರ್ವಹಿಸಿದರು. ಶ್ರೀ ಮಹೇಶ್ ಅಮೀನ್ ಅವರು ಧನ್ಯವಾದ ಸಮರ್ಪಿಸಿದರು.

ಸುದೀರ್ಘ ಸೇವೆಯನ್ನು ಗೌರವಿಸುವ ಮೂಲಕ ಹಿರಿಯರ ಸೇವಾ ಅನುಭವವನ್ನು ಸ್ಮರಿಸಿದ ಈ ಕಾರ್ಯಕ್ರಮವು ಆತ್ಮೀಯ ಹಾಗೂ ಗೌರವಪೂರ್ಣ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿತು.


ಈ ಸಮಾರಂಭದಲ್ಲಿ ಗ್ರಹ ರಕ್ಷಕರಾದ ಪ್ರೇಮ ಶೋಭಾ, ಕಮಲಕ್ಷಾ, ದಿನೇಶ್, ಪ್ರಶಾಂತ್ ಸುಮಾರು 20 ಜನರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top